ಮಂಗಳೂರು: ರಜೆಯಲ್ಲಿ ಊರಿಗೆ ಆಗಮಿಸಿದ್ದ ಬಿಎಸ್ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರು ನಗರದ ಕುಲಶೇಖರ ಸಮೀಪದ ಉಮಿಕಾನ ನಿವಾಸಿ ಹರೀಶ್ ಕುಮಾರ್(43) ಮೃತಪಟ್ಟ ಬಿಎಸ್ಎಫ್ ಯೋಧರಾಗಿದ್ದಾರೆ. ಮೃತರು ಪತ್ನಿ, 6 ವರ್ಷದ ಪುತ್ರ, ಒಂದೂವರೆ ವರ್ಷದ ಪುತ್ರಿ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಕಳೆದ 21 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದರು. 142ನೇ ಬಟಾಲಿಯನ್ ಒಡಿಶಾದಲ್ಲಿ ಕರ್ತವ್ಯದಲ್ಲಿದ್ದು, ರಜೆಯ ಹಿನ್ನೆಲೆಯಲ್ಲಿ ಊರಿಗೆ ಆಗಮಿಸಿದ್ದರು. ಶನಿವಾರ ಅವರಿಗೆ ಹೃದಯಾಘಾತವಾಗಿತ್ತು.
ತಕ್ಷಣ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರವಿವಾರ ಕೊನೆಯುಸಿರೆಳೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


