ಬೆಂಗಳೂರು: ಕರ್ನಾಟಕದ ನಂದಿನಿಯನ್ನು ಗುಜರಾತ್ ನ ಅಮುಲ್ ಜೊತೆಗೆ ವಿಲೀನ ಮಾಡುವುದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
ಮಂಡ್ಯದಲ್ಲಿ ಗೃಹ ಸಚಿವ ಅಮಿತ್ ಶಾ ನಂದಿನಿ ಹಾಗೂ ಅಮೂಲ್ ವಿಲೀನ ವಿಚಾರವನ್ನು ಪ್ರಸ್ತಾಪಿಸಿರುವ ಹಿನ್ನೆಲೆಯಲ್ಲಿ ಸೃಷ್ಟಿಯಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ನಂದಿನಿ ವಿಲೀನವಾಗಲಿದೆ ಎಂದು ಯಾರೂ ಊಹೆ ಮಾಡಿ ಟೀಕೆ ಮಾಡಬಾರದು. ನಂದಿನಿ ತನ್ನ ಸ್ವಂತ ಅಸ್ಥಿತ್ವ ಉಳಿಸಿಕೊಳ್ಳಲಿದೆ. ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ ಎಂದಿದ್ದಾರೆ.
ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ. ನಂದಿನಿ ಮತ್ತು ಅಮುಲ್ ತಾಂತ್ರಿಕ ವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ ಎಂದು ಸಮರ್ಥಿಸಿಕೊಂಡರು.
ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮುಲ್ ತಾಂತ್ರಿಕವಾಗಿ ಮುಂದಿದ್ದರೆ ವಿನಿಯಮ ಮಾಡಿಕೊಳ್ಳಬಹುದು. ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ ಎಂದು ಅವರು ಹೇಳಿದ್ದಾರೆ. ಅದರ ತಪ್ಪು ಅರ್ಥ ಕಲ್ಪಿಸುವ ಅಥವಾ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ ಎಂದು ಅವರು ಸಮರ್ಥಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


