ವೈ.ಎನ್.ಹೊಸಕೋಟೆ: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಅಂಗವಾಗಿ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಭಾನುವಾರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಸಂಘದ ಪ್ರಧಾನ ಕಾರ್ಯದರ್ಶಿ ಉಮಾಕಾಂತ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಅಮರ ಶಿಲ್ಪಿ ಜಕಣಾಚಾರಿ ಅವರು ಹಲವಾರು ದೇವರ ಮೂರ್ತಿಗಳು ಮತ್ತು ಶಿಲ್ಪಗಳನ್ನು ಕೆತ್ತನೆ ಮಾಡಿದ್ದಾರೆ. ಇಂತಹ ಕಲೆ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ.
ಮಕ್ಕಳಿಗೆ ಶಿಕ್ಷಣದ ಜೊತೆಗೆ ಶಿಲ್ಪ ಕಲೆಯ ಬಗ್ಗೆ ಆಸಕ್ತಿ ಮೂಡಿಸುವ ಕೆಲಸವಾಗಬೇಕು. ಇಂತಹ ಕಲೆ ಉಳಿಸಿ ಬೆಳಿಸಿದಾಗ ಮಾತ್ರ ಜಕಣಾಚಾರಿ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಆದಿ ನಾರಾಯಣಾಚಾರಿ, ನಿರ್ದೇಶಕರಾದ ಶಿವಶಂಕರಾಚಾರಿ, ಸತ್ಯನಾರಾಯಣಾಚಾರಿ, ಕೌಶಿಕ್ ಹಾಜರಿದ್ದರು.
ವರದಿ: ನಂದೀಶ್ ನಾಯ್ಕ್, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy