ಬೆಳಗಾವಿ : ಕೆಪಿಟಿಸಿಎಲ್ ಕಿರಿಯ ಸಹಾಯಕರ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.
ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಡಿವೈಸ್ ಗಳ ಮೂಲಕ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ತಾಲೂಕಿನ ನದಿ ಇಂಗಳಗಾವ್ ನ ಕಿರಣ್ ಕೊರಬು (28), ಬೈಲಹೊಂಗಲ ತಾಲ್ಲೂಕಿನ ಜಕನಾಯಕನಕೊಪ್ಪ ಗ್ರಾಮದ ನಾಗಯ್ಯ ಹುಬ್ಬಳ್ಳಿ (26), ಗೋಕಾಕ್ ತಾಲೂಕಿನ ಹಡಗಿನಾಳ ಗ್ರಾಮದ ನಾಗಪ್ಪ ಹೊಸಮನಿ (29), ಗೋಕಾಕ ತಾಲೂಕಿನ ಬೆಣಚಿಮನರಡಿ ಗ್ರಾಮದ ಶಶಿಕಾಂತ ಮಾಗಿ (25) ಹಾಗೂ ಬಗರನಾಳ ಗ್ರಾಮದ ದೇವರಾಜ ಅವಲಿ (26) ಬಂಧಿಸಲಾಗಿದೆ.
2022 ಅಕ್ಟೋಬರ್ 7 ರಂದು ನಡೆದ ಕೆಪಿಟಿಸಿಎಲ್ ಸ್ಪರ್ಧಾತ್ಮಕ ಪರೀಕ್ಷೆಗೆ ಬಂಧಿತ ಆರೋಪಿಗಳು ಅತ್ಯಾಧುನಿಕ ಡಿವೈಸ್ ಬಳಸಿ ಪರೀಕ್ಷೆ ಬರೆದಿದ್ದರು. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು 36 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
