ಫುಡ್ ಪಾಯ್ಸನ್ ನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಸೋಮವಾರ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ.
ಕೇರಳದ ಕೊಟ್ಟಾಯಂ ಬಳಿಯ ಕ್ಲೀರೂರಿನ ರೇಶ್ಮಿ (33) ಮೃತಪಟ್ಟ ಮಹಿಳೆಯಾಗಿದ್ದಾರೆ.. ಇವರು ಕೊಟ್ಟಾಯಂನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಆರ್ಥೋಪೆಡಿಕ್ಸ್ ವಿಭಾಗದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗಷ್ಟೇ ಕೊಟ್ಟಾಯಂನ ‘ಮಲಪ್ಪುರಂ ಮಂತಿ’ ಎಂಬ ಹೋಟೆಲ್ ನಲ್ಲಿ ಆಲ್ಫಂ (Alfam) ಖರೀದಿಸಿ ತಿಂದಿದ್ದರು.
ಇದರ ನಂತರ, ಅಸ್ವಸ್ಥಗೊಂಡಿದ್ದ ಅವರನ್ನು ಡಿಸೆಂಬರ್ 31ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರೇಶ್ಮಿ ಮೃತಪಟ್ಟಿದ್ದಾಳೆ.
ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವಷ್ಟೇ ಸಾವಿಗೆ ಕಾರಣ ತಿಳಿಯಲಿದೆ ಎಂದು ವೈದ್ಯಕೀಯ ಕಾಲೇಜು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಈ ಹೋಟೆಲ್ ನಿಂದ ಆಹಾರ ಸೇವಿಸಿದ 15ಕ್ಕೂ ಹೆಚ್ಚು ಜನರು ಫುಡ್ ಪಾಯ್ಸನ್ ನಿಂದ ಬಳಲುತ್ತಿದ್ದರು. ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಸುರಕ್ಷತಾ ಉಲ್ಲಂಘನೆಯನ್ನು ಉಲ್ಲೇಖಿಸಿ ರೆಸ್ಟೋರೆಂಟ್ ಅನ್ನು ಮುಚ್ಚಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


