ಪಶ್ಚಿಮ ಬಂಗಾಳದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಐವರು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದಿದ್ದಾರೆ. ಹೊಸ ವರ್ಷಾಚರಣೆಯಂದು ದೇಶವನ್ನೇ ಬೆಚ್ಚಿ ಬೀಳಿಸುವ ಘಟನೆ ಜಲ್ಪೈಗುರಿಯಲ್ಲಿ ನಡೆದಿದೆ. ಇದಾದ ಬಳಿಕ ಸಿಟ್ಟಿಗೆದ್ದ ಸ್ಥಳೀಯರು ಆರೋಪಿಗಳ ಮನೆಗಳನ್ನು ಧ್ವಂಸಗೊಳಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮನೆಯವರು ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ತಂದೆ ನೀಡಿರುವ ದೂರಿನ ಪ್ರಕಾರ ಆರೋಪಿಗಳ ಪೈಕಿ ಒಬ್ಬರೇ ಸ್ವತಃ ಕರೆ ಮಾಡಿ ಮಗಳ ಸಾವಿನ ಬಗ್ಗೆ ಮಾಹಿತಿ ನೀಡಿದ್ದಾರೆ. ಮನೆಯವರು ಬಂದು ನೋಡಿದಾಗ ಮೃತದೇಹ ಪತ್ತೆಯಾಗಿದೆ.
ಮೃತಬಾಲಕಿಗೆ ಯುವಕರು ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಬಗ್ಗೆ ಬಾಲಕಿಯ ತಂದೆ ಆರೋಪಿಸಿದ್ದಾರೆ.ಘಟನೆ ಬೆಳಕಿಗೆ ಬಂದ ನಂತರ ಸ್ಥಳೀಯರು ಜಮಾಯಿಸಿ ಆರೋಪಿಗಳ ಮನೆಗಳನ್ನು ಧ್ವಂಸಗೊಳಿಸಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಿ ಪರಿಸ್ಥಿತಿ ಹತೋಟಿಗೆ ತರಲಾಯಿತು. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


