ವಿಜಯನಗರ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಮಾಲವಿ ಜಲಾಶಯಕ್ಕೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಸ್ಥಳೀಯ ಶಾಸಕರಾದ ಭೀಮಾ ನಾಯಕ ಅವರ ಜೊತೆಗೂಡಿ ಬಾಗೀನ ಅರ್ಪಿಸಿದರು.
ಇದೇ ವೇಳೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಲಾಶಯಕ್ಕೆ ನೀರು ತುಂಬಿಸಲು 160 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿದ್ದೆ, ನಮ್ಮ ಸರ್ಕಾರದ ಪ್ರಯತ್ನದ ಫಲವಾಗಿ 50 ವರ್ಷಗಳ ಬಳಿಕ ಜಲಾಶಯ ಭರ್ತಿಯಾಗಿದೆ ಈ ಕ್ಷಣ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ ಎಂದರು.
ಈ ವೇಳೆ ಮಾಜಿ ಸಚಿವರಾದ ಸಂತೋಷ್ ಲಾಡ್, ತುಕಾರಾಮ್, ಪರಮೇಶ್ವರ ನಾಯಕ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಕಂಪ್ಲಿ ಗಣೇಶ್, ಬೈರತಿ ಸುರೇಶ್ ಸೇರಿದಂತೆ ಅನೇಕರು ಹಾಜರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


