ಚಿತ್ರದುರ್ಗ: ಮುಂಬರುವ 2023ರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಸೆಡ್ಡು ಹೊಡೆದು ಹೊಸ ಪಕ್ಷ ರಚನೆ ಮಾಡಿದ್ದು, ರೆಡ್ಡಿ ಪಕ್ಷಕ್ಕೆ ಒಬ್ಬೊಬ್ಬರಾಗಿ ಸೇರುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಅಭ್ಯರ್ಥಿಗೆ ಅವಕಾಶ ನೀಡಿ ಎಂದು ಕ್ಷೇತ್ರ ಪ್ರಚಾರದಲ್ಲಿದ್ದ ಗನ್ನಾಯಕನಹಳ್ಳಿ ಎಚ್.ಮಹೇಶ್ ಅವರು ಜನಾರ್ಧನ ರೆಡ್ಡಿ ಅವರನ್ನು ಭೇಟಿ ಮಾಡಿದ್ದಾರೆ. ಮಹೇಶ್ ಅವರು ತನ್ನ ಕಾರ್ಯಕರ್ತರೊಂದಿಗೆ ಗಂಗಾವತಿಯಲ್ಲಿರುವ ಕೆಆರ್‌ಪಿ ಪಕ್ಷದ ಕಚೇರಿಗೆ ತೆರಳಿ ಜನಾರ್ಧನ್ ರೆಡ್ಡಿ ಅವರನ್ನು ಭೇಟಿಯಾಗಿದ್ದಾರೆ.
ಈ ಕುರಿತು ಮಾತನಾಡಿರುವ ಜನಾರ್ಧನ್ ರೆಡ್ಡಿಯವರು, ಹಿರಿಯೂರು ಕ್ಷೇತ್ರ ಎಂದರೇ ದುಡ್ಡಿನ ಕ್ಷೇತ್ರವಾಗಿದೆ. ದುಡ್ಡು ಇದ್ದವರಿಗೆ ಮಾತ್ರ ಇಲ್ಲಿ ಗೆಲುವು ಸಾಧ್ಯ ಎನ್ನುತ್ತಾರೆ. ನೀವು ನಮ್ಮ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ, ನಾನು ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ ಎಂದು ಅವರು ಸೂಚಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


