ತಿಪಟೂರು: ಶ್ರೀ ಗುರು ಸಿದ್ದರಾಮೇಶ್ವರರ 850ನೇ ಜಯಂತಿ ಮಹೋತ್ಸವವನ್ನು ಜನವರಿ 14 ಮತ್ತು 15ರಂದು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು, ಈ ಮಹೋತ್ಸವಕ್ಕೆ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿಸಿನಾಗೇಶ್ ತಿಳಿಸಿದರು.
ಸಿದ್ಧರಾಮೇಶ್ವರ ಪಾಲಿಟೆಕ್ನಿಕಲ್ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜನವರಿ 14ರಂದು ಬೆಳಿಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಿರಿಗೆರೆ ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮತ್ತು ಮೈಸೂರು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಹಾಗೂ ಗೋಡೆಕೆರೆ ಮೃತ್ಯುಂಜಯ ದೇಸಿ ಕೇಂದ್ರ ಸ್ವಾಮೀಜಿ ಹಾಗೂ ಕುಪೂರ್ ತಮಡಿಯಲ್ಲಿ ಅಭಿನವ ಮಲ್ಲಿಕಾರ್ಜುನ ದೇಶಿ ಕೇಂದ್ರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಎಸ್.ಮಧುಸುಧನ್ ಮಾತನಾಡಿ, ಕೆರಗೋಡಿ ರಂಗಾಪುರ ಗುರು ಪರದೇಶಿ ಕೇಂದ್ರ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಎರಡು ದಿನ ಶ್ರೀ ಗುರು ಸಿದ್ದರಾಮೇಶ್ವರ 850ನೇ ಜಯಂತಿ ಅದ್ದೂರಿಯಾಗಿ ಆಚರಿಸಲಾಗುವುದು, ವೈಭವದ ಉತ್ಸವ ರಾತ್ರಿ ಸುಡು ಮದ್ದಿನ ಪ್ರದರ್ಶನ, ವೀರಗಾಸೆ, ಪ್ರತಿದಿನ ಬರುವ ಭಕ್ತಾದಿಗಳಿಗೆ ಎರಡರಿಂದ ಮೂರು ಲಕ್ಷ ಜನಕ್ಕೆ ಊಟ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಗೃಹ ಸಚಿವರು, ಜೆ.ಎಸ್.ಬಸವರಾಜ್, ಬಿ.ಸಿ.ಪಾಟೀಲ್, ಶೋಭಾ ಕರಂದ್ಲಾಜೆ ಭಾಗವಹಿಸಲಿದ್ದು, 15ರಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಆಗಮಿಸಿ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy