ಬೆಳಗಾವಿ : ಕೆಪಿಟಿಸಿಎಲ್ ಕಿರಿಯ ಸಹಾಯಕರ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧ ಜಿಲ್ಲಾ ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ.
ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ಡಿವೈಸ್ ಗಳ ಮೂಲಕ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧ ಗೋಕಾಕ್ ತಾಲೂಕಿನ ಮರಡಿಮಠ ಗ್ರಾಮದ ವೈಷ್ಣವಿ ಸನದಿ (21), ಉಪ್ಪಾರಟ್ಟಿ ಗ್ರಾಮದ ಸುಧಾರಾಣಿ ಅರಂಭಾವಿ (24), ತುಕ್ಕಾನಟ್ಟಿ ಗ್ರಾಮದ ಐಶ್ವರ್ಯಾ ಬಾಗೇವಾಡಿ (22) ಹಾಗೂ ಬಗರನಾಳ ಗ್ರಾಮದ ಬಸವರಾಜ ಪಾವಡಿ (27) ಅವರನ್ನು ಬಂಧಿಸಲಾಗಿದೆ.
2022 ಅಕ್ಟೋಬರ್ 7 ರಂದು ನಡೆದ ಕೆಪಿಟಿಸಿಎಲ್ ಪರೀಕ್ಷೆಗೆ ಬಂಧಿತ ಆರೋಪಿಗಳು ಅತ್ಯಾಧುನಿಕ ಡಿವೈಸ್ ಬಳಸಿ ಪರೀಕ್ಷೆ ಬರೆದಿದ್ದರು ಎನ್ನಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು 41 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


