ತುರುವೇಕೆರೆ: ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ಆರಂಭಗೊಂಡಿದ್ದು, ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭಾಗಿಯಾಗಲಿದ್ದಾರೆ.
ಇಂದು 11:30ರಿಂದ ಮೆರವಣಿಗೆ ಆರಂಭಗೊಂಡಿದ್ದು, ಮಧ್ಯಾಹ್ನ 1 ಗಂಟೆಯ ವೇಳೆಗೆ ವೇದಿಕೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಕಾರ್ಯಕ್ರಮಕ್ಕೆ ಈಗಾಗಲೇ ವೇದಿಕೆ ಸಿದ್ಧವಾಗಿದ್ದು, ಕಾರ್ಯಕರ್ತರು ಆಗಮಿಸುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ತೀವ್ರ ಬಿಸಿಲಿನ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಶಾಮಿಯಾನ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಊಟದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz