ತುಮಕೂರು: ಜಿಲ್ಲೆಯ ತುರುವೇಕೆರೆಯಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಿತು.
ಕಾರ್ಯಕ್ರಮದಲ್ಲಿ ಮಾಜಿ ಸಿಎಂ, ವಿಪಕ್ಷನ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಮಧು ಬಂಗಾರಪ್ಪ, ಮಾಜಿ ಸಚಿವರಾದ ಟಿ.ಬಿ. ಜಯಚಂದ್ರ, ಶಾಸಕರಾದ ರಾಜೇಂದ್ರ, ಬೈರತಿ ಸುರೇಶ್, ನಾಗರಾಜ ಯಾದವ್, ಮಾಜಿ ಶಾಸಕರಾದ ರಾಜಣ್ಣ, ಷಡಕ್ಷರಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
ತುರುವೇಕೆರೆಗೆ ಆಗಮಿಸಿದ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರು ಸೇಬು, ಜೋಳ, ಕೊಬ್ಬರಿ, ಕಂಬಳಿ ಹಾರಗಳನ್ನು ಹಾಕುವ ಮೂಲಕ ಕಾಂಗ್ರೆಸ್ ನಾಯಕರಿಗೆ ಆತ್ಮೀಯ ಸ್ವಾಗತ ಕೋರಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


