2002ರ ಗೋಧ್ರಾ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಕುಟುಂಬ ಸದಸ್ಯರನ್ನು ಕೊಂದ 11 ಆರೋಪಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತೆ ಹಿಂದೆ ಸರಿದಿದ್ದಾರೆ.
ಇದಕ್ಕೆ ಕಾರಣವನ್ನು ನಿರ್ದಿಷ್ಟಪಡಿಸಲಾಗಿಲ್ಲ. ಕಳೆದ ತಿಂಗಳು ಕೂಡ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರು ಬಾನೊ ಅವರ ಮರುಪರಿಶೀಲನಾ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿದಿದ್ದರು.
ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಆರೋಪಿಗಳ ಬಿಡುಗಡೆ ವಿರುದ್ಧದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಫೆಬ್ರವರಿಗೆ ಮುಂದೂಡಿದೆ. ಸಂತ್ರಸ್ತ ಬಿಲ್ಕಿಸ್ ಅವರ ಅರ್ಜಿಯೊಂದಿಗೆ ಸಾಮಾಜಿಕ ಕಾರ್ಯಕರ್ತರು ಸಲ್ಲಿಸಿರುವ ಅರ್ಜಿಗಳನ್ನೂ ಪರಿಗಣಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಬುಧವಾರ ನಡೆದ ವಿಚಾರಣೆಯಲ್ಲೂ ಗುಜರಾತ್ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ಸಿಪಿಐಎಂ ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್, ಲಕ್ನೋ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ರೂಪ ರೇಖಾ ವರ್ಮಾ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮಹುವಾ ಮೊಯಿತ್ರಾ ಅವರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


