nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ತುರುವೇಕೆರೆಯಲ್ಲಿ ಕಾಂಗ್ರೆಸ್ ಗೆಲುವು ಅಷ್ಟೇ ಸತ್ಯ: ಸಿದ್ದರಾಮಯ್ಯ ವಿಶ್ವಾಸ
    ತುರುವೇಕೆರೆ January 4, 2023

    ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ತುರುವೇಕೆರೆಯಲ್ಲಿ ಕಾಂಗ್ರೆಸ್ ಗೆಲುವು ಅಷ್ಟೇ ಸತ್ಯ: ಸಿದ್ದರಾಮಯ್ಯ ವಿಶ್ವಾಸ

    By adminJanuary 4, 2023No Comments3 Mins Read
    congress turuvekere
    • ಸುರೇಶ್ ಬಾಬು ಎಂ., ತುರುವೇಕೆರೆ

    ತುರುವೇಕೆರೆ: ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ,  ಈ ಬಾರಿ ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ಗೆಲ್ಲುವುದು ಅಷ್ಟೇ ಸತ್ಯ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

    ತುರುವೇಕೆರೆ  ಪಟ್ಟಣದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಕಾರ್ಯಕರ್ತರ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಈ ಕ್ಷೇತ್ರದ ಜನರ ಉತ್ಸಾಹ ಹುರುಪನ್ನು ನೋಡಿದರೆ, ತುರುವೇಕೆರೆ ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ವಿಜಯಶಾಲಿಯಾಗಿ ಮಾಡಿ ಗತವೈಭವವನ್ನು ನೆನಪು ಮಾಡುತ್ತೀರಿ. ಜೊತೆಗೆ ತುರುವೇಕೆರೆ ತಾಲೂಕಿನಲ್ಲಿ ಯಾವುದೇ ಮನಸ್ತಾಪಗಳಿಲ್ಲದೆ ಎಲ್ಲಾ ಮುಖಂಡರುಗಳು ಒಟ್ಟಾಗಿ ಸೇರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಸಿದ್ದರಾಗಿದ್ದೀರಿ ಎಂದು ಕಾರ್ಯಕರ್ತರನ್ನು ಹುರಿದುಂಬಿಸಿದರು.


    Provided by
    Provided by

    ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಈ ಬಾರಿ ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ಗೆಲ್ಲುವುದು ಅಷ್ಟೇ ಸತ್ಯ. ಈ 40% ಕಮಿಷನ್ ಕೇಳುವ ಸರ್ಕಾರವನ್ನು ಕಿತ್ತೊಗೆದು ರೈತರಿಗೆ ಆಗುತ್ತಿರುವ ಅನ್ಯಾಯ ಹಾಗೂ ಭ್ರಷ್ಟಾಚಾರದಿಂದ ಮುಕ್ತಿಗೊಳಿಸಿ ಜನರ ಹಿತದೃಷ್ಟಿಯಿಂದ ನೀವು ನಮ್ಮ ಪಕ್ಷವಾದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಸಿದ್ಧರಿದ್ದೀರಿ ಎಂಬುದು ನಮಗೆ ಎದ್ದು ಕಾಣುತ್ತಿದೆ ಎಂದರು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ತುಮಕೂರು ಜಿಲ್ಲೆಗೆ ಹಾಗೂ ನಮ್ಮ ರಾಜ್ಯಕ್ಕೆ ಇಷ್ಟೊಂದು ಜನಸ್ತೋಮ ಸೇರಿ ಒಳ್ಳೆಯ ಸಂದೇಶವನ್ನು ಕಳಿಸಿದ್ದೀರಿ.  ಅದಕ್ಕಾಗಿ ನಿಮಗೆ ಕೋಟಿ ನಮನಗಳನ್ನು ಸಲ್ಲಿಸುತ್ತೇನೆ. ಈ ಭ್ರಷ್ಟ ಬಿಜೆಪಿ ಸರ್ಕಾರ ಗ್ಯಾಸ್ ನ ಬೆಲೆ , ಪೆಟ್ರೋಲ್ ನ ಬೆಲೆ ದಿನನಿತ್ಯ ಬಳಸುವ ವಸ್ತುಗಳ ಬೆಲೆ ಜಾಸ್ತಿ ಮಾಡುತ್ತಿದೆ.  ರೈತರ ಆದಾಯವನ್ನು ದುಪ್ಪಟ್ಟು ಮಾಡುವ ಬದಲು ಕತ್ತರಿ ಹಾಕುತ್ತಿದೆ.  ಕುಡಿಯುವ ನೀರಿಗೆ ಮೀಟರ್ ಅಳವಡಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಈ ಬಾರಿ ಕಾಂಗ್ರೆಸ್ ಪಕ್ಷವನ್ನು ನೀವು ಅಧಿಕಾರಕ್ಕೆ ತಂದಿದ್ದೆ, ಆದರೆ ಯಾವುದೇ ತರಹದ ಉರುಳಿಲ್ಲದೆ ಆಡಳಿತವನ್ನು ಮಾಡುತ್ತೇವೆ. ದಯಮಾಡಿ ಈ ಬಾರಿ ತಾಲೂಕಿನಿಂದ ಕಾಂಗ್ರೆಸ್ ಪಕ್ಷವನ್ನ ಗೆಲ್ಲಿಸಿ ವಿಧಾನಸೌಧಕ್ಕೆ ನಿಮ್ಮ ಶಾಸಕನನ್ನು ಕಳಿಸಿಕೊಡಿ ಎಂದು ಮನವಿ ಮಾಡಿದರು.

    ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರಾದ ಮಧು ಬಂಗಾರಪ್ಪ ಮಾತನಾಡಿ, ಈ ಜನ ಸಮೂಹ ನೋಡಿದರೆ ತುಮಕೂರು ಜಿಲ್ಲೆಯಿಂದ ಒಬ್ಬರನ್ನಂತು ನೀವು ಗೆಲ್ಲಿಸಿ ವಿಧಾನಸೌಧಕ್ಕೆ ಕಳಿಸುತ್ತೀರಿ ಎನ್ನುವುದು ಖಚಿತವಾಗಿದೆ ಎಂದರು.

    ಉಚಿತವಾಗಿ ತಮಗೆ ವಿದ್ಯುತ್ ಸಂಪರ್ಕವನ್ನು ನೀಡಿದ್ದು, ವಾಸಕ್ಕೆ ಮನೆಗಳನ್ನು ಉಚಿತವಾಗಿ ನೀಡಿದ್ದು, ಆಗಿನ ಮುಖ್ಯಮಂತ್ರಿಗಳಾದ ದಿವಂಗತ ಎಸ್.ಬಂಗಾರಪ್ಪನವರು ಎಂಬುದು ನೆನಪಿನಲ್ಲಿರಲಿ. ಈ ಬಿಜೆಪಿ ಪಕ್ಷ ಧರ್ಮಗಳಲ್ಲಿ ಕಲಹ ತಂದು ಬಿಜೆಪಿ ಸರ್ಕಾರ ಮುಂದಿನ ಚುನಾವಣೆ ನಡೆಸಲು ತಯಾರಾಗಿದೆ. ಹಾಗಾಗಿ ಈ ರಾಜ್ಯದ ಭವಿಷ್ಯಕ್ಕೆ ನೀವುಗಳು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ ಈ ಬಾರಿ ಸಹಕಾರ ಮಾಡಿ ಎಂದು ನುಡಿದರು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆ.ಎನ್.ರಾಜಣ್ಣ,  ಈಗಿನ ಸರ್ಕಾರ  ಡಬಲ್ ಎಂಜಿನ್ ಸರ್ಕಾರ. ಒಂದು ಹಿಮ್ಮುಖವಾಗಿ, ಇನ್ನೊಂದು ಮುಮ್ಮುಖವಾಗಿ ಹಾದುಹೋಗುತ್ತಿದೆ. ಸರ್ಕಾರದ ಬೊಕ್ಕಸ ಖಾಲಿಯಾಗಿ ರೈತರು ಸಾಲದ ಸುಳಿಯಲ್ಲಿ ಸಿಕ್ಕಿದ್ದು,  ಜೊತೆಗೆ 40%  ಕಮಿಷನ್ ಕೊಡಲಾಗದೆ, ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ರೈತರಿಗೆ ಅವರ ಆದಾಯವನ್ನು ದುಪ್ಪಟ್ಟು ಮಾಡುತ್ತೇವೆ ಎಂದು ಸುಳ್ಳು ಹೇಳಿ ಈ ಸರ್ಕಾರ ನಡೆಸುತ್ತಾ ಬಂದಿದೆ. ಹಾಗಾಗಿ ಬರುವ 2023ರ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದರೆ ಮತ್ತೊಮ್ಮೆ ರೈತರ ಸಾಲವನ್ನು ಮನ್ನಾ ಮಾಡುತ್ತೇವೆ ಎಂದರು.

    ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಬೆಮೆಲ್ ಕಾಂತರಾಜು ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಮಾವೇಶದಲ್ಲಿ ಕಾಂಗ್ರೆಸ್ ನ ರಾಜ್ಯಮಟ್ಟದ ಘಟಾನುಘಟಿ ನಾಯಕರುಗಳಾದ ಮಾಜಿ ಸಚಿವ ಟಿಬಿ ಜಯಚಂದ್ರ,  ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ, ಬೈರತಿ ಸುರೇಶ್, ಮುರಳಿಧರ್ ಹಾಲಪ್ಪ , ಬಿ.ಎಸ್. ವಸಂತಕುಮಾರ್, ಸುಬ್ರಹ್ಮಣ್ಯ ಶ್ರೀಕಂಠೇಗೌಡ , ಗೀತಾ , ತಿಪಟೂರಿನ ಮಾಜಿ ಶಾಸಕ ಷಡಕ್ಷರಿ, ಕೆ.ಎನ್.ರಾಜಣ್ಣ, ಎನ್.ಆರ್.ಜಯರಾಮ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

    ಈ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಹೆಲಿಕ್ಯಾಪ್ಟರ್ ನಲ್ಲಿ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು  ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೆರವಣಿಗೆ ಮೂಲಕ ಕರೆತಂದು ಈ ಎರಡು ಜೋಡೆತ್ತುಗಳಿಗೆ ಮಾರ್ಗ ಮಧ್ಯೆ ಬೃಹತ್ ಕೊಬ್ಬರಿ ಹಾರ, ಹೂವಿನ ಹಾರಗಳನ್ನು ಹಾಕಿ, ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನವೊಂದು ಹರಿದ ಪರಿಣಾಮ,…

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.