ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್ಪಿಪಿ) ಪಕ್ಷದ ಪ್ರಣಾಳಿಕೆ ಮತ್ತು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಜನವರಿ 16ರ ನಂತರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, , ಜನರಿಂದ ಸಿಗುತ್ತಿರುವ ಪ್ರತಿಕ್ರಿಯೆ ನೋಡಿದರೆ, ನಮ್ಮ ಪಕ್ಷ ಬಲವನ್ನು ಹೆಚ್ಚಿಸಿಕೊಳ್ಳುವ ವಿಶ್ವಾಸವಿದೆ ಎಂದರು.
ರೆಡ್ಡಿ ಮತ್ತು ಅವರ ಪತ್ನಿ ಅರುಣಾ ಲಕ್ಷ್ಮಿ ಅವರು ಪಕ್ಷವನ್ನು ಪ್ರಾರಂಭಿಸಿದ ತಕ್ಷಣ ಗಂಗಾವತಿಯಿಂದ ಬಳ್ಳಾರಿ ವಿಧಾನಸಭಾ ಕ್ಷೇತ್ರಗಳಿಗೆ ಮುಸ್ಲಿಂ ಮತ್ತು ಕುರುಬ ಸಮುದಾಯಗಳನ್ನು ಓಲೈಸಲು ಯತ್ನ ನಡೆಸುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ನ ಸಾಂಪ್ರದಾಯಿಕ ಮತಗಳಿಗೆ ಹೊಡೆತ ಬೀಳಲಿದೆ ಎಂದು ಹೇಳಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


