ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ಸರ್ಕಾರ ಘೋಷಿಸಿರುವ 2ಡಿ ಮೀಸಲಾತಿಯನ್ನು ಸಂಪೂರ್ಣ ತಿರಸ್ಕರಿಸುವ ನಿರ್ಣಯ ಕೈಗೊಂಡಿದ್ದೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಗಾಂಧಿ ಭವನದಲ್ಲಿ ಪಂಚಮಸಾಲಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಘೋಷಿಸಿರುವ 2 ಡಿ ಮೀಸಲಾತಿಯನ್ನು ಪಂಚಮಸಾಲಿ ಸಮಾಜ ತಿರಸ್ಕರಿಸುತ್ತಿದೆ.
ಮುಖ್ಯಮಂತ್ರಿಗಳು 24 ಗಂಟೆಯಲ್ಲಿ ಮೀಸಲಾತಿ ಕೊಡುತ್ತಾರೋ ಇಲ್ಲವೋ ಎನ್ನುವುದನ್ನು ಸ್ಪಷ್ಟ ಪಡಿಸಬೇಕು ಎಂದು ಆಗ್ರಹಿಸಿದರು.
ಇದೇ ತಿಂಗಳು 12ನೇ ತಾರೀಖಿನ ಒಳಗಾಗಿ ಮೀಸಲಾತಿ ಹೊರಡಿಸಿ ಗೆಜೆಟ್ನಲ್ಲಿ ಘೋಷಣೆ ಮಾಡಬೇಕು. ಇಲ್ಲದೇ ಹೋದಲ್ಲಿ ಜನವರಿ 13 ರಂದು ಹಾವೇರಿಯಲ್ಲಿರುವ ಮುಖ್ಯಮಂತ್ರಿ ಮನೆ ಮುಂದೆ ಒಂದು ದಿನದ ಉಗ್ರ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


