ಹಾವೇರಿಯಲ್ಲಿ ಶುಕ್ರವಾರ ಕನ್ನಡ ತಾಯಿ ಭುವನೇಶ್ವರಿಯ 3 ದಿನಗಳ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಬೆಳಗ್ಗೆ ಆರಂಭಗೊಂಡಿದೆ. ಇದರ ಅಂಗವಾಗಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭಗೊಂಡಿತು.
ಇಂದಿನಿಂದ ಜನವರಿ 8 ವರೆಗೆ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿ ರಸ್ತೆಯ 130 ಎಕರೆ ವಿಸ್ತೀರ್ಣ ಜಾಗದಲ್ಲಿ ಕನಕ–ಶರೀಫ–ಸರ್ವಜ್ಞ ವೇದಿಕೆ ಮುಂಭಾಗ ಬೆಳಗ್ಗೆ 7 ಗಂಟೆಗೆ ಧ್ವಜಾರೋಹಣ ನೆರವೇರಿತು.
ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್, ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ ಮಹೇಶ್ ಜೋಶಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ ಹೀರೇಮಠ ನಾಡ ಧ್ವಜದ ಧ್ವಜಾರೋಹಣ ನೆರವೇರಿಸಿದರು. ಇದೇ ವೇಳೆ ವಿವಿಧ ಕಲಾತಂಡಗಳು ಸಾಹಿತ್ಯ ಮೆರವಣಿಗೆಯಲ್ಲಿ ಪಾಲ್ಗೊಂಡು ಮೆರುಗು ನೀಡಿದವು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


