ಹಾವೇರಿ: ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕನ್ನಡಿಗರು ಮತ್ತು ಸಾಹಿತ್ಯಾಸಕ್ತರ ನೆನಪಿನಲ್ಲಿ ಉಳಿಯುವಂತೆ ಆಯೋಜಿಸಲಾಗಿದೆ. ಕನ್ನಡಿಗರ ಬಗ್ಗೆ, ಭಾಷೆ, ನಾಡು-ನುಡಿಯ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವವರಿಗೆ ತಕ್ಕ ಉತ್ತರ ನೀಡಲಾಗುವುದು ಎಂದು ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆ ವೇಳೆ ಮಾತನಾಡಿದ ಅವರು, ನಾನು ನುಡಿಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಮಾತನಾಡಿ, ಹಾವೇರಿಗೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಜಿಲ್ಲಾಡಳಿತ ವತಿಯಿಂದ ಅದ್ದೂರಿ ಸ್ವಾಗತ ನೀಡಲಾಗಿದೆ. ಸಮ್ಮೇಳನ ಯಾವುದೇ ಗೊಂದಲಗಳಿಲ್ಲದೆ ಸುಗಮವಾಗಿ ನಡೆಯಲಿ ಎಂದು ನಿಗದಿತ ಸಮಯಕ್ಕೆ ಧ್ವಜಾರೋಹಣ ಮಾಡಿದ್ದೇವೆ ಎಂದರು.
ಕನ್ನಡ ನಾಡು ನುಡಿ ಭಾಷೆ ಬಗ್ಗೆ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಉತ್ತಮ ಚರ್ಚೆ ನಡೆಯಲಿದೆ. ಸಮ್ಮೇಳನದಲ್ಲಿ ಯಾವುದೇ ಅಭಾಸ, ಕುಂದುಕೊರತೆಯಾಗದಂತೆ ಸರ್ಕಾರ ಮತ್ತು ಜಿಲ್ಲಾಡಳಿತ ಎಚ್ಚರಿಕೆಯಿಂದ ಕೆಲಸ ಮಾಡಿದೆ. ಕನ್ನಡವೇ ಸತ್ಯ-ಕನ್ನಡವೇ ನಿತ್ಯ ಎಂಬ ಘೋಷಣೆಯನ್ನು ಜಾರಿಗೆ ತರಲು ಸರ್ಕಾರ ಸರ್ವರೀತಿಯಲ್ಲಿ ಪ್ರಯತ್ನ ಮಾಡುತ್ತಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


