nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026
    Facebook Twitter Instagram
    ಟ್ರೆಂಡಿಂಗ್
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    • ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
    • ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    • ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
    • ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂವಿಧಾನದಲ್ಲಿ ನಂಬಿಕೆ, ಗೌರವ ಇಲ್ಲದವರು ಜನಪ್ರತಿನಿಧಿಯಾಗಿರಬಾರದು: ಸಿದ್ದರಾಮಯ್ಯ
    ಜಿಲ್ಲಾ ಸುದ್ದಿ January 6, 2023

    ಸಂವಿಧಾನದಲ್ಲಿ ನಂಬಿಕೆ, ಗೌರವ ಇಲ್ಲದವರು ಜನಪ್ರತಿನಿಧಿಯಾಗಿರಬಾರದು: ಸಿದ್ದರಾಮಯ್ಯ

    By adminJanuary 6, 2023No Comments2 Mins Read
    mangalore

    Provided by
    Provided by

    ಮಂಗಳೂರು: ಕರಾವಳಿಯ ಜನ ರಾಜಕೀಯವಾಗಿ ಪ್ರಬುದ್ಧರು. ಇಲ್ಲಿನ ಜನ ನೆಮ್ಮದಿಯಾಗಿ ಇರಬೇಕು ಎನ್ನುವುದಾರೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ತೀರ್ಮಾನವನ್ನು ಮಾಡಬೇಕು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

    ಮಂಗಳೂರಿನ ಹರೇಕಳದಲ್ಲಿ ಆಯೋಜಿಸಿದ್ದ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, 2013ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ 8 ಸ್ಥಾನದಲ್ಲಿ 7 ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಟ್ಟಿದ್ದಿರಿ, ಉಡುಪಿಯಲ್ಲಿ 5 ರಲ್ಲಿ 3 ಸ್ಥಾನಗಳನ್ನು ಗೆಲ್ಲಿಸಿಕೊಟ್ಟಿದ್ದಿರಿ. ಇದು ಮತ್ತೆ ಮರುಕಳಿಸಬೇಕು.

    ಇಂದು ಎಲ್ಲಾ ಜಾತಿ, ಧರ್ಮಗಳ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಶಕ್ತಿಯಿರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ. ಎಲ್ಲ ಜನರಿಗೂ ನ್ಯಾಯವನ್ನು, ರಕ್ಷಣೆಯನ್ನು ನೀಡುವುದು ಕಾಂಗ್ರೆಸ್ ಮಾತ್ರ. ಬಿಜೆಪಿಯವರು ಚುನಾವಣಾ ಸಂದರ್ಭದಲ್ಲಿ ಅನೇಕ ಭರವಸೆಗಳನ್ನು ನೀಡಿ, ಅಧಿಕಾರಕ್ಕೆ ಬಂದ ಮೇಲೆ ತಾವು ನೀಡಿದ್ದ ಭರವಸೆಗಳನ್ನು ಮರೆತು ಸಮಾಜ ಒಡೆಯುವ ಕೆಲಸ ಮಾಡುತ್ತಾರೆ ಎಂದ ಹೇಳಿದರು.

    ನಮ್ಮದು ಬಹುತ್ವದ ದೇಶ. ಇಲ್ಲಿ ಅನೇಕ ಜಾತಿ, ಧರ್ಮ, ಭಾಷೆ, ಸಂಸ್ಕೃತಿಯ ಜನರಿದ್ದಾರೆ. ದೇಶದಲ್ಲಿ 140 ಕೋಟಿ ಜನಸಂಖ್ಯೆ ಹೊಂದಿದ್ದೇವೆ. ಕೆಲವೇ ವರ್ಷಗಳಲ್ಲಿ ಜನಸಂಖ್ಯೆಯಲ್ಲಿ ನಂ.1 ಆಗುತ್ತೇವೆ. ಇಷ್ಟು ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಕೆಲಸ ಆಗಬೇಕು, ಎಲ್ಲರಿಗೂ ರಕ್ಷಣೆ ಸಿಗಬೇಕು.


    Provided by
    Provided by

    ಅಂಬೇಡ್ಕರರು ನೀಡಿರುವ ಸಂವಿಧಾನದಲ್ಲಿ ಯಾರು ಯಾವ ಧರ್ಮ ಬೇಕಾದರೂ ಅನುಸರಿಸುವ ಸ್ವಾತಂತ್ರ್ಯ ನೀಡಿದ್ದಾರೆ. ದೇಶದ ಬಹುತ್ವದ ರಕ್ಷಣೆಯ ವಿಚಾರಗಳನ್ನು ಸಂವಿಧಾನ ಒಳಗೊಂಡಿದೆ. ಆದರೆ ಬಿಜೆಪಿಗೆ ಈ ಸಂವಿಧಾನದಲ್ಲಿ ನಂಬಿಕೆಯಿಲ್ಲ. ಕಾರಣ ಅವರಿಗೆ ಸಮಾನ ಹಕ್ಕುಗಳು, ಸಮಾನ ಅವಕಾಶಗಳನ್ನು ನೀಡುವುದರಲ್ಲಿ ಒಲವಿಲ್ಲ.

    ಅಸಮಾನತೆಯ ಸಮಾಜ, ಜಾತಿ ವ್ಯವಸ್ಥೆ ಇರಬೇಕು ಹೀಗಿದ್ದಾಗ ಜಾತಿ ಧರ್ಮಗಳ ಆಧಾರದ ಮೇಲೆ ಜನರನ್ನು ಪರಸ್ಪರ ಎತ್ತಿಕಟ್ಟಿ, ಅಸಮಾನತೆಯನ್ನು ಸೃಷ್ಟಿಸಿ ಆ ಮೂಲಕ ಶೋಷಣೆ ಮಾಡಬಹುದು ಎಂಬುದು ಅವರ ಲೆಕ್ಕಾಚಾರ. ಎಲ್ಲರೂ ಸಮಾನರಾಗಿ, ಸಮಾನತೆಯ ಸಮಾಜ ನಿರ್ಮಾಣವಾದರೆ ಶೋಷಣೆಗೆ ಅವಕಾಶ ಆಗಲ್ಲ ಎಂಬುದು ಅವರ ಯೋಚನೆ ಎಂದು ಅವರು ಹೇಳಿದರು.

    ನರೇಂದ್ರ ಮೋದಿ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಕಾರವಾರ ಜಿಲ್ಲೆಯ ಅನಂತ ಕುಮಾರ್ ಹೆಗ್ಡೆ ಅವರು ನಾವು ಅಧಿಕಾರಕ್ಕೆ ಬಂದಿರುವುದೇ ಈ ಸಂವಿಧಾನವನ್ನು ಬದಲಾವಣೆ ಮಾಡಲು ಎಂದು ಹೇಳಿದ್ದರು. ಸಂವಿಧಾನದಲ್ಲಿ ನಂಬಿಕೆ, ಗೌರವ ಇಲ್ಲದವರು ಜನಪ್ರತಿನಿಧಿಯಾಗಿರಬಾರದು.

    ಇಂಥವರು ಗ್ರಾಮ ಪಂಚಾಯತ್ ಸದಸ್ಯನಾಗಿರಲು ಕೂಡ ನಾಲಾಯಕ್. ಅವರು ಹೀಗೆ ಹೇಳುವಾಗ ಅಮಿತ್ ಶಾ ಪಕ್ಷದ ಅಧ್ಯಕ್ಷರು, ಮೋದಿ ಪ್ರಧಾನಿಯಾಗಿದ್ದರು, ಇವರ ಮೇಲೆ ಯಾವುದಾದರೂ ಶಿಸ್ತಿನ ಕ್ರಮ ತೆಗೆದುಕೊಂಡರಾ? ಇದರ ಅರ್ಥ ಏನು? ಮೋದಿ ಮತ್ತು ಅಮಿತ್ ಶಾ ಅವರೇ ಅನಂತ ಕುಮಾರ್ ಹೆಗ್ಡೆ ಅವರ ಕೈಲಿ ಹೇಳಿಸಿದ್ದು, ಇಲ್ಲದಿದ್ರೆ ಅವರನ್ನು ಪಕ್ಷದಿಂದ ವಜಾ ಮಾಡಬೇಕಿತ್ತು ಅಂತಲ್ಲವಾ?

    ಹೊನ್ನಾವರದ ಪರೇಶ್ ಮೇಸ್ತಾ ಎಂಬ ಯುವಕ ಸತ್ತಾಗ ಕಾಂಗ್ರೆಸ್ ನವರೇ ಕೊಲೆ ಮಾಡಿಸಿದ್ದು ಎಂದು ಅನಂತ ಕುಮಾರ್ ಹೆಗ್ಡೆ ಅಪಪ್ರಚಾರ ಮಾಡಿದರು. ಆ ಕೂಡಲೇ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ, ಆಗ ಕೇಂದ್ರದಲ್ಲಿ ನಮ್ಮ ಸರ್ಕಾರ ಇರಲಿಲ್ಲ.

    ಈಗ ಸಿಬಿಐ ವರದಿಯಲ್ಲಿ ಪರೇಶ್ ಮೇಸ್ತಾನದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ಬಂದಿದೆ. ಈಗ ಅನಂತ್ ಕುಮಾರ್ ಹೆಗ್ಡೆ ಏನ್ ಹೇಳ್ತಾರೆ? ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಗೆ ಹೋಗಬೇಕು. ಹೀಗೆ ಅನೇಕ ಸಾವುಗಳನ್ನು ಕೊಲೆಗಳು ಎಂದು ಬೇರೆಯವರ ಮೇಲೆ ಎತ್ತುಕಟ್ಟುವ ಕೆಲಸವನ್ನು ಜಿಲ್ಲೆಯಲ್ಲಿ ಮಾಡಿದ್ದಾರೆ ಎಂದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    ಔರಾದ್: ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತೀವ್ರ ಹಾಹಾಕಾರ ಉಂಟಾದ ಹಿನ್ನೆಲೆಯಲ್ಲಿ, ತಾಲೂಕು ಅಧಿಕಾರಿಗಳು ಹಾಗೂ ಗ್ರಾಮ…

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.