ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡುಕೋಣ ದಾಳಿಗೆ ಮತ್ತೋರ್ವ ಯುವಕ ಗಾಯಗೊಂಡಿದ್ದು, ಚಿಕ್ಕಮಗಳೂರು ತಾಲೂಕಿನ ನಿಡಗೋಡು ಗ್ರಾಮದಲ್ಲಿ ಕಾಡುಕೋಣ ದಾಳಿ ನಡೆದಿದೆ.
ಮನೋಜ್ ಕಾಡುಕೋಣ ದಾಳಿಯಿಂದ ಗಾಯಗೊಂಡ ಯುವಕನಾಗಿದ್ದು, ಇವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತೋಟದಲ್ಲಿದ್ದಾಗ ಏಕಾಏಕಿ ಮನೋಜ್ ಮೇಲೆ ದಾಳಿ ಮಾಡಿದ ಕಾಡುಕೋಣ ಗಂಭೀರವಾಗಿ ಗಾಯಗೊಳಿಸಿದೆ. ಕಳೆದ 15 ದಿನದಲ್ಲಿ ಜಿಲ್ಲೆಯಲ್ಲಿ ಇದು ಮೂರನೇ ಬಾರಿಗೆ ಕಾಡುಕೋಣ ದಾಳಿ ನಡೆಸುತ್ತಿದೆ.
ಈಗಾಗಲೇ ಜಿಲ್ಲೆಯಲ್ಲಿ ಕಾಡುಕೋಣ ದಾಳಿಗೆ ಓರ್ವ ಸಾವನ್ನಪ್ಪಿದ್ದು ಇಬ್ಬರಿಗೆ ಗಾಯವಾಗಿದೆ. ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


