ಕಲಬುರಗಿ: ತೀವ್ರ ಸಂಚಲನ ಮೂಡಿಸಿದ್ದ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.
ಪ್ರಮುಖ ಆರೋಪಿ ಕಿಂಗ್ಪಿನ್ ದಿವ್ಯಾ ಹಾಗರಗಿ, ಡಿವೈಎಸ್ಪಿ ಮಲ್ಲಿಕಾರ್ಜುನ ಸೇರಿದಂತೆ 26 ಜನರಿಗೆ ಕಲಬುರಗಿ ಸೆಷನ್ಸ್ ಕೋರ್ಟ್ ಜಡ್ಜ್ ಜಾಮೀನು ನೀಡಿದ್ದಾರೆ.
ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಈವರೆಗೆ 36 ಜನರಿಗೆ ಜಾಮೀನು ಸಿಕ್ಕಿದೆ. ಎಂಟು ಅಭ್ಯರ್ಥಿಗಳು,ಮೂವರು ಪೊಲೀಸ್ ಇಲಾಖೆ ಅಧಿಕಾರಿಗಳು, ಮಧ್ಯವರ್ತಿಗಳು ಸೇರಿ 26 ಜನರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


