ಮಧ್ಯಪ್ರದೇಶದಲ್ಲಿ ಸಣ್ಣ ವಿಮಾನ ಪತನ, ಪೈಲಟ್ ಸಾವು ಸಹ ಪೈಲಟ್ ಗಾಯಗೊಂಡಿದ್ದಾರೆ. ಫಾಲ್ಕನ್ ಏವಿಯೇಷನ್ ಅಕಾಡೆಮಿಯ ತರಬೇತಿ ವಿಮಾನ ಅಪಘಾತವಾಗಿದೆ.
ಮಧ್ಯಪ್ರದೇಶದ ರಿವಾದಲ್ಲಿನ ದೇವಸ್ಥಾನದ ಮೇಲೆ ವಿಮಾನ ಪತನಗೊಂಡಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಪೈಲಟ್ ಮತ್ತು ಸಹ ಪೈಲಟ್ ಮಾತ್ರ ವಿಮಾನದಲ್ಲಿದ್ದರು. ತರಬೇತಿ ಹಾರಾಟದ ವೇಳೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ವಿಮಾನ ಹಾರಿಸಿದ ಟ್ರೈನಿ ಪೈಲಟ್ ಸಾವನ್ನಪ್ಪಿದ್ದಾರೆ.
ಸಹ ಪೈಲಟ್ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪೈಲಟ್ ಮೃತಪಟ್ಟಿದ್ದಾರೆ.ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಘಟನೆ ಕುರಿತು ಡಿಜಿಸಿಎ ವರದಿ ಕೇಳಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


