ಧಾರವಾಡ : ತಾಯಿ-ಮಗಳ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ತಾಯಿ ಮಕ್ತುಮ್ಬಿ (50) ಮಗಳು ಶಹನಾಜ್ (22) ಅವರ ಶವ ಎನ್ನುವುದು ಪತ್ತೆಯಾಗಿದೆ. ಗ್ರಾಮದ ಹೊರವಲಯದ ಕೆರೆಯಲ್ಲಿ ಶವಗಳು ತೇಲುತ್ತಿರುವುದನ್ನು ಕಂಡು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದರು.
ಶವಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


