ಹುಬ್ಬಳ್ಳಿ: ನಾನು ಒಬ್ಬ ಹಿಂದೂ, ಆದರೆ ನಾನು ಹಿಂದುತ್ವಕ್ಕೆ ವಿರುದ್ಧವಾಗಿದ್ದೇನೆ. ಧರ್ಮ ಇಟ್ಟುಕೊಂಡು ರಾಜಕೀಯ ಮಾಡಲು ವಿರೋಧವಿದೆ. ಸಂವಿಧಾನದಲ್ಲಿ ಎಲ್ಲ ಧರ್ಮಗಳು ಸಮಾನ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಹಿಂದೂ, ಕ್ರೈಸ್ತ, ಮುಸ್ಲಿಂ ಎಲ್ಲ ಧರ್ಮಗಳು ಕೂಡ ಸಮಾನವಾಗಿವೆ. ಯಾವುದೇ ಧರ್ಮ ಹೆಚ್ಚು ಅಲ್ಲ, ಕಡಿಮೆಯೂ ಅಲ್ಲ. ಧರ್ಮ ಮತ್ತು ಜಾತಿ ಆಧಾರದ ಮೇಲೆ ರಾಜಕಾರಣ ಮಾಡಬಾರದು.
ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಆರ್ಎಸ್ಎಸ್ ಸ್ಥಾಪನೆ ಆಗಿದೆ. ಆದರೆ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ರಾ ಎಂದು ಪ್ರಶ್ನಿಸಿದರು. 1925-47ರವರೆಗೆ ಯಾರಾದ್ರು ಭಾಗವಹಿಸಿದ್ರೆ ಹೇಳಿ ನೋಡೋಣ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


