ಬೆಂಗಳೂರು: ರಾಜ್ಯ ಸರ್ಕಾರ ನೂತನವಾಗಿ 50 ತಾಲೂಕುಗಳನ್ನು ರಚಿಸಿ ಆದೇಶಿಸಿತ್ತು. ಈ ಬೆನ್ನಲ್ಲೇ 8 ತಾಲೂಕುಗಳಲ್ಲಿ ಹೊಸದಾಗಿ ಉಪ ನೋಂದಣಾಧಿಕಾರಿ ಕಚೇರಿ ಪ್ರಾರಂಭಿಸಲು ಆದೇಶಿಸಿದೆ.
ಈ ಸಂಬಂಧ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 34 ತಾಲೂಕುಗಳಲ್ಲಿ ಹೊಸದಾಗಿ ಉಪ ನೋಂದಣಿ ಕಚೇರಿಗಳನ್ನು ಪ್ರಾರಂಭಿಸಲು ಪ್ರಸ್ತಾಪಿಸಲಾಗಿರುತ್ತದೆ ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಕಾಗವಾಡ, ಕುಕನೂರು, ಕನಕಗಿರಿ, ಸಿರಿವಾರ, ಉಡುಪಿಯ ಕಾಪು, ಬಬಲೇಶ್ವರ, ತಿಕೋಟಾ ಹಾಗೂ ತಾಳಿಕೋಟೆಯಲ್ಲಿ ನೂತನವಾಗಿ ಹೊಸ ಉಪನೋಂದಣಾಧಿಕಾರಿಗಳ ಕಚೇರಿಗಳು ಆರಂಭಗೊಳ್ಳಲಿವೆ.
ಹೊಸದಾಗಿ ರಚಿಸಲಾಗಿರುವ ತಾಲೂಕುಗಳ ಪೈಕಿ 8 ತಾಲೂಕುಗಳಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಹೊಸ ಉಪ ನೋಂದಣಾಧಿಕಾರಿಗಳ ಕಚೇರಿಗಳನ್ನು ಹೊಸದಾಗಿ ಪ್ರಾರಂಭಿಸಲು ಅನುಮೋದನೆ ನೀಡಿ ಆದೇಶಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


