ಆಸ್ಟ್ರೇಲಿಯಾದಲ್ಲಿ ನಡೆದ ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಕಳಪೆ ಪ್ರದರ್ಶನ ನೀಡಿ ಸೆಮಿಫೈನಲ್ ನಲ್ಲಿ ಸೋತ ಬಳಿಕ ಇಡೀ ಆಯ್ಕೆ ಮಂಡಳಿಯನ್ನೇ ವಿಸರ್ಜನೆ ಮಾಡಿದ್ದ ಬಿಸಿಸಿಐ ಇದೀಗ ಭಾರತ ಕ್ರಿಕೆಟ್ ತಂಡದ ನೂತನ ಆಯ್ಕೆ ಸಮಿತಿಯನ್ನು ಪ್ರಕಟಿಸಿದೆ.
ಹೊಸ ಆಯ್ಕೆ ಸಮಿತಿಯಲ್ಲಿ (new selection committee) ಸ್ಥಾನ ಪಡೆದಿರುವ 5 ಸದಸ್ಯರ ಹೆಸರನ್ನು ಪ್ರಕಟಿಸಿರುವ ಬಿಸಿಸಿಐ, ಇದರಲ್ಲಿ ನಾಲ್ವರು ಹೊಸಬರಿಗೆ ಅವಕಾಶ ನೀಡಿದರೆ, ಮುಖ್ಯ ಆಯ್ಕೆದಾರನ ಸ್ಥಾನಕ್ಕೆ ಈ ಹಿಂದೆ ಇದೇ ಹುದ್ದೆಯಲ್ಲಿದ್ದ ಚೇತನ್ ಶರ್ಮಾ ಅವರನ್ನು ಮರು ಆಯ್ಕೆ ಮಾಡಿದೆ.
ಆಯ್ಕೆ ಸಮಿತಿಯ ಮುಖ್ಯಸ್ಥರನ್ನಾಗಿ ಚೇತನ್ ಶರ್ಮಾ ಹಾಗೂ ಸದಸ್ಯರಾಗಿ ಮಾಜಿ ಟೆಸ್ಟ್ ಕ್ರಿಕೆಟಿಗರಾದ ಸಲೀಲ್ ಅಂಕೋಲಾ, ಶಿವಸುಂದರ್ ದಾಸ್, ಸುಬ್ರೋತೊ ಬ್ಯಾನರ್ಜಿ ಮತ್ತು ಶ್ರೀಧರನ್ ಶರತ್ ಸ್ಥಾನ ಪಡೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


