ಪಾವಗಡ: ತಾಲ್ಲೂಕಿನ ಯ.ನಾ.ಹೊಸಕೋಟೆ ಗ್ರಾಮದ ದೊಡ್ಡಹಳ್ಳಿಗೆ ಮುಖ್ಯ ರಸ್ತೆಯನ್ನು ಸಂಪರ್ಕಿಸುವ ನೂರಾರು ಜನರು ಪ್ರತಿನಿತ್ಯ ಸಂಚರಿಸುವ ರಸ್ತೆಯಲ್ಲೇ ನೀರು ಹರಿದು ಹೋಗುತ್ತಿದ್ದು, ಸಾರ್ವಜನಿಕರು ಪರದಾಡುವಂತಾಗಿತ್ತು. ಈ ಬಗ್ಗೆ ನಮ್ಮತುಮಕೂರು ಸವಿವರವಾದ ವರದಿ ಪ್ರಕಟ ಮಾಡಿದ ಕೆಲವೇ ದಿನಗಳಲ್ಲಿ ರಸ್ತೆಯನ್ನು ಸರಿಪಡಿಸಲಾಗಿದೆ.
“ಯ.ನಾ.ಹೊಸಕೋಟೆ ಗ್ರಾಮದಲ್ಲೊಂದು ನರಕದ ದಾರಿ: ರಸ್ತೆಯ ಸೌಂದರ್ಯ ನೋಡಿ ಹೋದ ಪಿಡಿಒ” ಅನ್ನೋ ಶೀರ್ಷಿಕೆಯಡಿಯಲ್ಲಿ ರಸ್ತೆ ಸಮಸ್ಯೆಯ ಕುರಿತಂತೆ ನಮ್ಮತುಮಕೂರು ವರದಿ ಮಾಡಿತ್ತು. ಇಲ್ಲಿನ ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಚ್ಚಿಡಲಾಗಿತ್ತು.
ಇದೀಗ ವರದಿಯ ಫಲವಾಗಿ ಎಚ್ಚೆತ್ತುಕೊಂಡ ಅಧಿಕಾರಿಗಳು ಕೊನೆಗೂ ರಸ್ತೆ ಸರಿಪಡಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.ಇನ್ನೂ ವಿದ್ಯಾರ್ಥಿಗಳು, ವೃದ್ಧರು, ಮಹಿಳೆಯರು ಈ ದಾರಿಯಲ್ಲಿ ಸಂಚರಿಸಲು ಪರದಾಡುತ್ತಿದ್ದರು.
ಇದೀಗ ನಮ್ಮ ತುಮಕೂರು ಮಾಧ್ಯಮವು ಈ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿ ಅಧಿಕಾರಿಗಳ ಕಣ್ಣು ತೆರೆಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರು ನಮ್ಮತುಮಕೂರು ಮಾಧ್ಯಮಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ವರದಿ: ನಂದೀಶ್ ನಾಯ್ಕ್, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy