ತಿಪಟೂರು ಎರಡನೇ ಹಂತದ ಜೆಡಿಎಸ್ ನ ಪಂಚರತ್ನ ಯಾತ್ರೆ ತಿಪಟೂರು ತಾಲೂಕಿಗೆ ಆಗಮಿಸಲಿದ್ದು ಈ ಸಮಯದಲ್ಲಿ ಕಾಂಗ್ರೆಸ್ನ ಮುಖಂಡರು ಕೆಲನ ನಗರಸಭೆ ಸದಸ್ಯರು ಬಿಜೆಪಿ ಸದಸ್ಯರು ಜೆಡಿಎಸ್ ಗೆ ಸೇರಲು ಒಲವು ತೋರಿದ್ದಾರೆ ಎಂದು ತಿಪಟೂರು ತಾಲೂಕು ಜೆಡಿಎಸ್ ಅಧ್ಯಕ್ಷ ಶಿವು ಸ್ವಾಮಿ ತಿಳಿಸಿದರು.
ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯದ್ಯಂತ ನಡೆಯುತ್ತಿರುವ ಮೊದಲ ಹಂತದ ಪಂಚರತ್ನ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದ್ದು, ಬೇರೆ ಬೇರೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಈಗಾಗಲೇ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಅದೇ ರೀತಿ ತಿಪಟೂರಿನಲ್ಲಿ ಕಾಂಗ್ರೆಸ್ ಮುಖಂಡ ಕೆ.ಟಿ. ಶಾಂತಕುಮಾರ್ ಅವರಿಗೆ ಜೆಡಿಎಸ್ ಸೇರಲು ಬಹಿರಂಗವಾಗಿ ಆಹ್ವಾನ ನೀಡುತ್ತಿರುವುದಾಗಿ ತಿಳಿಸಿದರು.
ತಿಪಟೂರು ನಗರಸಭೆ ಕೆಲಸ ಸದಸ್ಯರು ಜನವರಿ ಮಧ್ಯಭಾಗದಲ್ಲಿ ಪಂಚರತ್ನ ಯಾತ್ರೆ ತಿಪಟೂರು ತಾಲೂಕಿಗೆ ಆಗಮಿಸಲಿದ್ದು , ಈ ಸಂದರ್ಭದಲ್ಲಿ ಎಲ್ಲಾ ಮುಖಂಡರುಗಳನ್ನು ಜೆಡಿಎಸ್ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ತಿಳಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಜಗದೀಶ್ ತಡಸೂರು, ಗ್ರಾಮ ಪಂಚಾಯಿತಿ ಸದಸ್ಯ ನಟರಾಜ್, ರೈತ ವಿಭಾಗದ ಶ್ರೀನಿವಾಸ್, ಉಮಾ ಮಹೇಶ್ ಹಾಗೂ ತಿಮ್ಮೇಗೌಡ ಇದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1