ಬೆಂಗಳೂರು: ಇಂದು ಸಿದ್ದು ನಿಜಕನಸುಗಳು ಪುಸ್ತಕ ಲೋಕಾರ್ಪಣೆ ಆಗುತ್ತಿದ್ದು, ಕಾಂಗ್ರೆಸ್ ಪಕ್ಷದಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಈ ಪುಸ್ತಕ ಬಿಡುಗಡೆ ಕಾರ್ಯಕ್ರಮ ಸಾಮರಸ್ಯ ಕದಡುವ ಕೆಲಸವಾಗಿದೆ. ಕಾರ್ಯಕ್ರಮವನ್ನು ರದ್ದು ಮಾಡಬೇಕು ಎಂದು ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ಹೆಸರು ಬಳಸಿ ತೇಜೋವಧೆ ಮಾಡಲಾಗುತ್ತಿದೆ. ಪುಸ್ತಕದ ಮುಖಪುಟದಲ್ಲಿ ಅವರ ಭಾವಚಿತ್ರವನ್ನು ವಿರೂಪಗೊಳಿಸಲಾಗಿದೆ. ಕಲ್ಪಿತ ಪ್ರಚೋದನಕಾರಿ ಬರಹಗಳು ಈ ಪುಸ್ತಕದಲ್ಲಿವೆ.
ಇದರಿಂದ ಸಾಮರಸ್ಯ ಕದಡುವ ಸಾಧ್ಯತೆಯಿದ್ದು, ಕಾರ್ಯಕ್ರಮ ರದ್ದು ಮಾಡಬೇಕು ಎಂಬ ಎಸ್ ಜೆ ಪಾರ್ಕ್ ಪೊಲೀಸರಿಗೆ ಮನವಿ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


