ಬಜರಂಗದಳದ ಕಾರ್ಯಕರ್ತರೊಬ್ಬರ ಮೇಲೆ ಯುವಕನೋರ್ವ ತಲ್ವಾರ್ ನಿಂದ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಸಾಗರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಜರಂಗದಳದ ಕಾರ್ಯಕರ್ತ ಸುನೀಲ್ ಮೇಲೆ ಯುವಕ ಸಮೀರ್ ತಲ್ವಾರ್ ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಶೌರ್ಯ ಪಥ ಸಂಚಲನದಲ್ಲಿ ಸುನೀಲ್ ಭಾಗಿಯಾಗಿದ್ದರು.
ಈ ಮಧ್ಯೆ ಸಾಗರ ಬಸ್ ನಿಲ್ದಾಣಕ್ಕೆ ಬಂದ ಸುನೀಲ್ ಮೇಲೆ ಸಮೀರ್ ತಲ್ವಾರ್ ನಿಂದ ಹಲ್ಲೆಗೆ ಯತ್ನಿಸಿದ್ದಾರೆ. ಸಮೀರ್ ನೋಡಿ ಸುನೀಲ್ ತಪ್ಪಿಸಿಕೊಂಡಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸುನೀಲ್ ಮೇಲೆ ದಾಳಿ ಖಂಡಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಾಗರದಲ್ಲಿನ ಸಮೀರ್ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದು ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


