ಚಂಡೀಗಢ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಹರಿಹಾಯ್ದಿರುವ ರಾಹುಲ್ ಗಾಂಧಿ, ಆರ್‌ಎಸ್‌ಎಸ್‌ನವರು 21ನೇ ಶತಮಾನದ ಕೌರವರು ಎಂದು ವಾಗ್ದಾಳಿ ನಡೆಸಿದ್ದಾರೆ.
ಹರಿಯಾಣ ಮಹಾಭಾರತದ ನೆಲ, ಕೌರವರು ಯಾರು.. ನಿಮಗೆ 21ನೇ ಶತಮಾನದ ಕೌರವರ ಬಗ್ಗೆ ಹೇಳುತ್ತೇನೆ. ಅವರು ಖಾಕಿ ಚೆಡ್ಡಿ ಧರಿಸುತ್ತಾರೆ. ಲಾಠಿ ಹಿಡಿಯುತ್ತಾರೆ, ಶಾಖೆ ನಡೆಸುತ್ತಾರೆ ಎಂದು ಜರಿದಿದ್ದಾರೆ.
ಭಾರತ್ ಜೋಡೊ ಯಾತ್ರೆಯು ಹರಿಯಾಣದ ಅಂಬಾಲಾ ಜಿಲ್ಲೆಯನ್ನು ಪ್ರವೇಶಿಸಿದ ಸಂದರ್ಭದಲ್ಲಿ ಅವರು ಸುದ್ದಿಗಾರರ ಜೊತೆಗೆ ಮಾತನಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


