ತುರುವೇಕೆರೆ: ಪಟ್ಟಣದ ತಾಲೂಕು ಆಡಳಿತದಿಂದ ಜನವರಿ 26ನೇ ಗುರುವಾರ ಗಣರಾಜ್ಯೋತ್ಸವದ ಪೂರ್ವ ಸಾಧ್ಯತೆಯನ್ನು ಕೈಗೊಳ್ಳಲು ತಾಲೂಕು ಕಚೇರಿಯಲ್ಲಿ ಶಾಸಕರಾದ ಮಸಾಲ ಜಯರಾಮ್ ರವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ತಾಲೂಕು ಆಡಳಿತದ ಎಲ್ಲಾ ಇಲಾಖೆಗಳಿಗೂ ಸಭೆಯ ಬಗ್ಗೆ ಮಾಹಿತಿ ನೀಡಿದ್ದು, ಅದರಲ್ಲಿ ಕೆಲವು ಇಲಾಖೆಗಳು ಪೂರ್ವಭಾವಿ ಸಭೆಗೆ ಹಾಜರಾಗಿರಲಿಲ್ಲ. ಇದನ್ನು ಗಮನಿಸಿದ ಶಾಸಕ ಮಸಾಲ ಜಯರಾಮ್, ಹಾಜರಾಗದ ಇಲಾಖೆಗಳಿಗೆ ತಕ್ಷಣ ನೋಟಿಸ್ ನೀಡಿ ಎಂದು ತಾಲೂಕು ದಂಡಾಧಿಕಾರಿಗಳಾದ ವೈ.ಎಂ.ರೇಣು ಕುಮಾರ್ ರವರಿಗೆ ಸೂಚಿಸಿದರು.
ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಾರದೆ ಇದ್ದರೆ, ಅವರ ವಿರುದ್ಧ ಕಾನೂನು ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಇದೇ ವೇಳೆ ಅವರು ಹೇಳಿದರು. ಪೂರ್ವಭಾವಿ ಸಭೆಯಲ್ಲಿ ಕೆಲವೊಂದು ಇಲಾಖೆಗಳು ಹಾಜರಿದ್ದು, ಆಯಾ ಇಲಾಖೆಯ ಜವಾಬ್ದಾರಿಗಳನ್ನು ನೀಡಿದರು.
ಈ ಸಭೆಯಲ್ಲಿ ತಾಲೂಕು ದಂಡಾಧಿಕಾರಿಗಳಾದ ವೈ.ಎಂ. ರೇಣು ಕುಮಾರ್, ತಾಲೂಕು ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್, ಮುಖಂಡರಾದ ಕೊಂಡಜ್ಜಿ ವಿಶ್ವನಾಥ್ , ಬುಗುಡನಹಳ್ಳಿ ಕೃಷ್ಣಮೂರ್ತಿ , ವಿ.ಟಿ.ವೆಂಕಟರಾಮಯ್ಯ, ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯ ಚಿದಾನಂದ್ ಸೇರಿದಂತೆ ಅನೇಕ ಮುಖಂಡರುಗಳು ಹಾಜರಿದ್ದರು.
ಗಣರಾಜ್ಯೋತ್ಸವದಲ್ಲಿ ವಿವಿಧ ಇಲಾಖೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಹಾಗೂ ರಾಷ್ಟ್ರಮಟ್ಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಹೊಸ ಬೆಳೆಗಳನ್ನು ಬೆಳೆದ ತಾಲೂಕಿನ ಮಾದರಿ ರೈತರಿಗೆ ಇನ್ನೂ ಅನೇಕರಿಗೆ ಸನ್ಮಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1