nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಂದ್ರಗಿರಿ ತೀರದಲ್ಲಿ ಮರೆಯಾದ ಸಾಹಿತಿ, ಲೇಖಕಿ ಡಾ.ಸಾರಾ ಅಬೂಬಕರ್
    ರಾಜ್ಯ ಸುದ್ದಿ January 11, 2023

    ಚಂದ್ರಗಿರಿ ತೀರದಲ್ಲಿ ಮರೆಯಾದ ಸಾಹಿತಿ, ಲೇಖಕಿ ಡಾ.ಸಾರಾ ಅಬೂಬಕರ್

    By adminJanuary 11, 2023No Comments2 Mins Read
    sara abubakkar

    ಕನ್ನಡದ ಹಿರಿಯ ಸಾಹಿತಿ, ಲೇಖಕಿ ಡಾ.ಸಾರಾ ಅಬೂಬಕರ್(87) ಇಂದು ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

    ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಮೂಲತಃ ಕಾಸರಗೋಡಿನ ಚಂದ್ರಗಿರಿ ತೀರದವರಾದ ಸಾರಾ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಎಂಬಲ್ಲಿ ವಾಸವಾಗಿದ್ದರು.


    Provided by
    Provided by

    ‘ಚಂದ್ರಗಿರಿ ತೀರದಲ್ಲಿ‌’ ಕಾದಂಬರಿಯ ಮೂಲಕ ಪ್ರಸಿದ್ಧಿಗೆ ಬಂದಿದ್ದ ಸಾರಾ ಅಬೂಬಕರ್ ಅನೇಕ ಕೃತಿಗಳನ್ನು ರಚಿಸಿ ಖ್ಯಾತರಾಗಿದ್ದರು. ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಮಹಿಳಾ ಧ್ವನಿಯಾಗಿದ್ದ ಸಾರಾ ಅಬೂಬಕರ್ ಅವರು 1936ರ ಜೂನ್ 30ರಂದು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ಜನಿಸಿದರು.

    ನ್ಯಾಯವಾದಿ ಪಿ.ಅಹ್ಮದ್ ಮತ್ತು ಜೈನಾಬಿ ದಂಪತಿಯ ಪುತ್ರಿಯಾಗಿರುವ ಅವರು ಹುಟ್ಟೂರಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ್ದರು. ಕಾಸರಗೋಡಿನಲ್ಲಿ ಹೈಸ್ಕೂಲ್ ಪೂರೈಸಿದ ಸಾರಾ ತನ್ನ ಅಜ್ಜಿ ಹೇಳುತ್ತಿದ್ದ ಕಥೆಗಳಿಂದಾಗಿ ಅವರು ಎಳೆಯದರಲ್ಲೇ ಸಾಹಿತ್ಯ ಕ್ಷೇತ್ರದತ್ತ ಆಕರ್ಷಿತರಾಗಿದ್ದರು. ಇಂಜಿನಿಯರ್ ಆಗಿದ್ದ ಅಬೂಬಕರ್ ಅವರೊಡನೆ ವಿವಾಹವಾದ ಬಳಿಕ ಅವರ ಶಿಕ್ಷಣ ಅರ್ಧದಲ್ಲೇ ಮೊಟಕುಗೊಂಡಿತು. ಸಾರಾ ಅಬೂಬಕರ್ ಅವರ ಪ್ರಥಮ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಇದು ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತ್ತು.

    ಸಾರಾ ಅಬೂಬಕರ್ ಸಹನಾ, ವಜ್ರಗಳು, ಕದನವಿರಾಮ, ಸುಳಿಯಲ್ಲಿ ಸಿಕ್ಕವರು, ಪ್ರವಾಹ-ಸುಳಿ ತಳ ಒಡೆದ ದೋಣಿ, ಪಂಜರ, ಇಳಿಜಾರು, ಕಾಣಿಕೆ ಇತ್ಯಾದಿ ಕಾದಂಬರಿಗಳನ್ನು ಅವರು ಬರೆದಿದ್ದಾರೆ. ಚಪ್ಪಲಿಗಳು, ಪಯಣ ಮತ್ತು ಇತರ ಕಥೆಗಳು, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು, ಖೆಡ್ಡ ಮುಂತಾದ ಕಥಾ ಸಂಕಲನ, ಕಮರಿದ ಕನಸು, ಮಗಳು ಹುಟ್ಟಿದಳು, ತೇಲಾಡುವ ಮೋಡಗಳು, ತಾಳ, ಹೀಗೂ ಒಂದು ಬದುಕು ಮುಂತಾದ ಬಾನುಲಿ ನಾಟಕಗಳನ್ನು ರಚಿಸಿದ್ದಾರೆ. ಲೇಖನ ಗುಚ್ಛ, ಮನೋಮಿ, ಬಲೆ, ನಾನಿನ್ನು ನಿದ್ರಿಸುವೆ ಇತ್ಯಾದಿ ಅನುವಾದಗಳನ್ನು ರಚಿಸಿರುವ ಅವರು, ‘ಐಷಾರಾಮದಲ್ಲಿ’ ಎಂಬ ಪ್ರವಾಸ ಕಥನವನ್ನೂ ಬರೆದಿದ್ದಾರೆ. ಅವರು ಮಲಯಾಳಂನ ಅನೇಕ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

    ಇವರ ಸಾಧನೆಯನ್ನು ಗುರುತಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ನಾಡೋಜ ಸೇರಿದಂತೆ ಅನೇಕ ಪ್ರಶಸ್ತಿಗಳು ಸಾರಾ ಅಬೂಬಕರ್ ಅವರನ್ನು ಅರಸಿ ಬಂದಿವೆ. ಕರ್ನಾಟಕ ಸಾಹಿತ್ಯ ಅಕಾಡಮಿಯ ಗೌರವ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ, ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಹೀಗೆ ಅನೇಕ ಪ್ರಶಸ್ತಿ, ಗೌರವಗಳಿಗೆ ಅವರು ಪಾತ್ರರಾಗಿದ್ದಾರೆ.

    ಮಂಗಳವಾರ ರಾತ್ರಿ ‌8 ಗಂಟೆ ಸುಮಾರಿಗೆ ಮಂಗಳೂರಿನ ಬಂದರ್ ಝೀನತ್ ಬಕ್ಷ್ ಮಸೀದಿ ಆವರಣದ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.