ತಿಪಟೂರು: ಮನೆಯಲ್ಲಿ ಹಿರಿಯರ ಮಾರ್ಗದರ್ಶನವಿಲ್ಲದೆ ಇಂದಿನ ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.
ಆದ್ದರಿಂದ ದುಶ್ಚಟಗಳಿಂದ ದೂರವಾಗಿ ದುಶ್ಚಟಮುಕ್ತ ಸಮಾಜ ನಿರ್ಮಾಣ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ನೊಣವಿನಕೆರೆ ಪಿಎಸ್ ಐ ಜಗದೀಶ್ ಅಭಿಪ್ರಾಯಪಟ್ಟರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೆಡಗರಹಳ್ಳಿ ಗ್ರಾಮದ ಅಂಬೇಡ್ಕರ್ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ತಾಲ್ಲೂಕು ಯೋಜನಾಧಿಕಾರಿ ಉದಯ್ ಮಾತನಾಡಿ, ಇಂದಿನ ಪೀಳಿಗೆಯ ಮಕ್ಕಳು ಮಿತಿಮೀರಿದ ವಿಜ್ಞಾನ ಹಾಗೂ ತಂತ್ರಜ್ಞಾನಗಳಿಂದ ಅವೈಜ್ಞಾನಿಕತೆಯನ್ನು ರೂಢಿಸಿಕೊಂಡು ಸಂಸ್ಕಾರಯುಕ್ತ ಪ್ರಜೆಗಳಾಗದೆ, ಬಾಹ್ಯ ಆಕರ್ಷಣೆಗಳಾದ ಕುಡಿತ, ತಂಬಾಕು ಸೇವನೆ, ಡ್ರಗ್ಸ್ ಇನ್ನು ಮುಂತಾದ ಚಟಗಳಿಗೆ ದಾಸರಾಗಿ ತಮ್ಮ ಬದುಕನ್ನು ತಾವು ಹಾಳು ಮಾಡಿಕೊಳ್ಳುತ್ತಿದ್ದಾರೆ.
ಇದನ್ನು ತ್ಯಜಿಸಿ ಮುಕ್ತಿ ಹೊಂದಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಹೇಳಿದರು.ಶಾಲಾ ಮುಖ್ಯಪಾಧ್ಯಾಯ ಯುವರಾಜ ನಾಯಕ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ರೂಪಕವಾಗಿ ಇಂದು ಮಕ್ಕಳಿಗೆ ಸಮಾಜದಲ್ಲಿ ವ್ಯಸನ ಮುಕ್ತ ಜೀವನವನ್ನು ನಡೆಸುವುದರ ಬಗ್ಗೆ ಮಾಹಿತಿ ನೀಡಿ ಜೀವನ ನಡೆಸುವ ಆದರ್ಶ ಪಥಕ್ಕೆ ಕೊಂಡೊಯ್ಯುವ ಮಾಹಿತಿ ನೀಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.
ಸಂದರ್ಭದಲ್ಲಿ ಮೇಲ್ವಿಚಾರಕ ಕೃಷ್ಣ ಆಚಾರ್ಯ, ಶಾಲಾ ಸಿಬ್ಬಂದಿ ವರ್ಗ, ಸೇವಾ ಪ್ರತಿನಿಧಿ ಇಂದ್ರಮ್ಮ, ಶಿವಗಂಗಾ, ವಿಎಲ್ ಇ ನೇತ್ರಾವತಿ, ದೇವಾನಂದ್, ಮಲ್ಲಿಕಾರ್ಜುನ್, ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ಧರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy