ಬೀದಿ ನಾಯಿ ಬೊಗಳಿದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದು, ಮಹಿಳೆಯೊಬ್ಬರ ಬರ್ಬರ ಹತ್ಯೆ ನಡೆದ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ.
ಲಾಲ್ ಮುನಿ(50) ಎಂಬವರು ಹತ್ಯೆಗೀಡಾದವರಾಗಿದ್ದು, ಇವರು ಆರೋಪಿಗಳ ಮನೆಯ ಮುಂಭಾಗದಲ್ಲಿ ಹೋಗುತ್ತಿದ್ದ ವೇಳೆ, ನಾಯಿ ಬೊಗಳಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಆರೋಪಿತರ ಮನೆಯವರಿಗೆ ದೂರು ಹೇಳಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದಿದೆ. ಗಲಾಟೆ ಕೇಳಿ ಲಾಲ್ ಮುನಿ ಕುಟುಂಬಸ್ಥರು ಸ್ಥಳಕ್ಕೆ ಆಗಮಿಸಿದ್ದು, ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.
ಆರೋಪಿಗಳು ಸಂತ್ರಸ್ತ ಮಹಿಳೆ ಲಾಲ್ ಮುನಿ ಹಾಗೂ ಕುಟುಂಬಸ್ಥರ ಮೇಲೆ ಮರದ ಕೋಲುಗಳಿಂದ ಹಲ್ಲೆ ನಡೆಸಿದ್ದು, ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಲಾಲ್ ಮುನಿ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


