ಹಾವೇರಿ: ದುಷ್ಕರ್ಮಿಗಳು4 ಏಕರೆ ಮೆಕ್ಕೆಜೋಳ ತೆನೆ ರಾಶಿಗೆ ಬೆಂಕಿ ಇಟ್ಟಿರುವಂತಹ ಘಟನೆ ಜಿಲ್ಲೆಯ ಹಾನಗಲ್ ತಾಲೂಕು ಕೆಲವರಕೊಪ್ಪ ಗ್ರಾಮದಲ್ಲಿ ನಡೆದಿದೆ.
ಬಸವರಾಜ್ ಎಂಬ ರೈತನಿಗೆ ಸೇರಿದ ರಾಶಿ ಎನ್ನಲಾಗಿದೆ. ಅಂದಾಜು ಮೂರು ಲಕ್ಷಕ್ಕೂ ರೂಪಾಯಿಗೂ ಅಧಿಕ ಮೌಲ್ಯದ ತೆನೆರಾಶಿ ಬೆಂಕಿಗಾಹುತಿಯಾಗಿದೆ.
ರಾತ್ರಿಯ ವೇಳೆ ಜಮೀನಿನಲ್ಲಿ ಮೆಕ್ಕೆಜೋಳ ತೆನೆಯ ರಾಶಿ ಹಾಕಲಾಗಿತ್ತು. ಈ ವೇಳೆ ದ್ವೇಷದಿಂದ ಅಪರಿಚಿತರು ರಾಶಿಗೆ ಬೆಂಕಿ ಹಾಕಿದ್ದಾರೆ ಎನ್ನಲಾಗಿದೆ. ಬೆಂಕಿ ನಂದಿಸಲು ಹರಸಾಹಸ ಪಟ್ಟರು ರಾಶಿಗಳು ಸುಟ್ಟು ಹೋಗಿವೆ. ಆಡೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


