ಮಂಗಳೂರು ಪೊಲೀಸರು ಭಾರೀ ಹೈಪ್ರೊಫೈಲ್ ಗಾಂಜಾ ದಂಧೆಯನ್ನು ಭೇದಿಸಿದ್ದು, ಇಬ್ಬರು ವೈದ್ಯರು, ನಾಲ್ವರು ವೈದ್ಯ ವಿದ್ಯಾರ್ಥಿನಿಯರು ಸೇರಿ 10 ಮಂದಿಯನ್ನ ಬಂಧಿಸಿದ್ದಾರೆ.
ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿನಿಯರು ಈ ದಂಧೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಅತ್ತಾವರ, ಕೆ.ಎಂ.ಸಿ ಮಣಿಪಾಲ, ದೇರಳಕಟ್ಟೆಯ ಯೆನೇಪೋಯಾ ಮೆಡಿಕಲ್ ಕಾಲೇಜಿನ ವೈದ್ಯರು ಹಾಗೂ ವಿದ್ಯಾರ್ಥಿಗಳು ಈ ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದಾರೆ.
ಯು.ಕೆ ಮೂಲದ ಗಾಂಜಾ ಪೆಡ್ಲರ್ ನೀಲ್ ಕಿಶೋರಿಲಾಲ್ ರಾಮ್ ಜೀ (38) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದು ಈ ವೇಳೆ ಮತ್ತಷ್ಟು ವಿಚಾರ ಬೆಳಕಿಗೆ ಬಂದಿತ್ತು. ನೀಲ್ ಕಿಶೋರಿಲಾಲ್ ರಾಮ್‌ನ ಮಾಹಿತಿ ಆಧಾರದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯರು, ವಿದ್ಯಾರ್ಥಿಗಳು ಹಾಗೂ ವೈದ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವೈದ್ಯರಾದ ಡಾ. ಸಮೀರ್(32), ಮಣಿಮಾರನ್ ಮುತ್ತು(28)ರನ್ನು ವಿದ್ಯಾರ್ಥಿನಿಯರಾದ ಡಾ. ನದಿಯಾ ಸಿರಾಜ್(24), ಡಾ.ವರ್ಷಿಣಿ ಪ್ರತಿ (26), ಡಾ.ರಿಯಾ ಚಡ್ಡ(22), ಡಾ. ಹೀರಾ ಬಸಿನ್(23), ವಿದ್ಯಾರ್ಥಿಗಳಾದ ಡಾ. ಭಾನು ದಹಿಯಾ (27), ಡಾ.ಕ್ಷಿತಿಜ್ ಗುಪ್ತ (23), ಸ್ಥಳೀಯ ಮಹಮ್ಮದ್ ರೌಫ್ ನನ್ನು ಬಂಧಿಸಲಾಗಿದೆ. ಆರೋಪಿಗಳ ಬಳಿಯಿದ್ದ 2 ಕೆ.ಜಿ ಗಾಂಜಾ, ಒಂದು ನಕಲಿ ಪಿಸ್ತೂಲ್, ಡ್ರಾಗರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


