ಸುಮಲತಾ ಬಿಜೆಪಿ ಅಸೋಸಿಯೇಟ್ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸಂಸದೆ ಸುಮಲತಾ ಅಂಬರೀಶ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ್ದೆ. ನನ್ನ ಪತಿ ಅಂಬರೀಶ್ 25 ವರ್ಷ ಕಾಂಗ್ರೆಸ್ ನಲ್ಲೇ ಇದ್ದರು. ಹೀಗಾಗಿ ನಾನು ಟಿಕೆಟ್ ಕೇಳಿದ್ದೆ. ಆದರೆ ಡಿ.ಕೆ. ಶಿವಕುಮಾರ್ ನಿರಾಕರಿಸಿದರು. ಜೆಡಿಎಸ್ ಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದೇವೆ ಎಂದು ಸ್ಪಷ್ಟವಾಗಿ ತಿಳಿಸಿದ್ದರು. ಹಾಗಾದ್ರೆ ಡಿ.ಕೆ. ಶಿವಕುಮಾರ್ ಜೆಡಿಎಸ್ ಅಸೋಸಿಯೇಟಾ..? ಎಂದು ಟಾಂಗ್ ನೀಡಿದರು.
ಅಂದು ಸಿದ್ಧರಾಮಯ್ಯ ನನ್ನ ಪರವಾಗಿ ಇದ್ದರು. ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ನನ್ನನ್ನು ಕೇಳದೇ ಸುಖಾ ಸುಮ್ಮನೇ ಹೇಳಿಕೆ ಕೊಡೋದು ಎಷ್ಟು ಸರಿ ಎಂದು ಸುಮಲತಾ ಅಂಬರೀಶ್ ಕಿಡಿಕಾರಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


