nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ

    November 5, 2025

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ

    November 5, 2025
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
    • ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
    • ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
    • ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
    • ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
    • ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
    • ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!
    • ಜಮೀನಿನ ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಲೋಕಾಯುಕ್ತ ಬಲೆಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅವಮಾನ ಆದರ್ಶವಿಲ್ಲದೆ ಬದುಕಿದ್ದರೆ ಬದುಕಿಗೆ ಅವಮಾನ :ಸ್ವಾಮಿ ವಿವೇಕಾನಂದ
    ಸ್ಪೆಷಲ್ ನ್ಯೂಸ್ January 12, 2023

    ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅವಮಾನ ಆದರ್ಶವಿಲ್ಲದೆ ಬದುಕಿದ್ದರೆ ಬದುಕಿಗೆ ಅವಮಾನ :ಸ್ವಾಮಿ ವಿವೇಕಾನಂದ

    By adminJanuary 12, 2023No Comments3 Mins Read
    swami vivekanamda

    ರಾಷ್ಟ್ರೀಯ ಯುವ ದಿನ….

    ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಹೀಗೆ ಆಚರಿಸಲಾಗುತ್ತದೆ. ಕಾರಣ ಯುವಕರನ್ನು ಅತ್ಯಂತ ಪ್ರೀತಿ ಗೌರವ ಅಭಿಮಾನದಿಂದ ಭವಿಷ್ಯದ ದೊಡ್ಡ ಶಕ್ತಿಯಾಗಿ ಗುರುತಿಸಿದವರು ಭಾರತದ ಸಾಂಸ್ಕೃತಿಕ ರಾಯಭಾರಿ ಸ್ವಾಮಿ ವಿವೇಕಾನಂದರು…..


    Provided by
    Provided by

    ಭಾರತದ ನಿಜವಾದ ಖಾವಿ ಧಾರಿ ಸ್ವಾಮಿ ವಿವೇಕಾನಂದರು ಮಾತ್ರ ಎಂದು ಕೆಲವರು ಹೇಳುತ್ತಾರೆ…..

    ” ಉಕ್ಕಿನ ದೇಹದ – ಕಬ್ಬಿಣದ ನರಮಂಡಲದ – ದೃಢ ಮತ್ತು ಕಠಿಣ ಮನಸ್ಸನ್ನು ” ಭಾರತದ ಯುವ ಶಕ್ತಿ ಹೊಂದಿರಬೇಕು ಎಂದು ಆಶಿಸಿದ್ದವರು ಸ್ವಾಮಿ ವಿವೇಕಾನಂದರು.
    ಆದರೆ ಈಗಿನ ವಾಸ್ತವ ಏನು……

    ಸೀಡ್ ಲೆಸ್ ಯುವ ಜನಾಂಗ…..

    ಹೌದು ಹಣ್ಣು ತರಕಾರಿಗಳಲ್ಲಿ ಸೀಡ್ ಲೆಸ್ ಸೃಷ್ಟಿಯಾಗುತ್ತಿರುವಂತೆ ಭಾರತೀಯ ಸಮಾಜದ ಯುವಕ ಯುವತಿಯರ ಮಾನಸಿಕ ಸ್ಥಿತಿ ಗಮನಿಸಿದರೆ ಸೀಡ್ ಲೆಸ್ ಜನಾಂಗವೊಂದು ಸೃಷ್ಟಿಯಾಗುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ.

    ಜಾಗತೀಕರಣದ ಪ್ರಭಾವದಿಂದಾಗಿ ಭಾರತದ ಮಧ್ಯಮ ವರ್ಗದ ಕುಟುಂಬಗಳಲ್ಲಿ ಬಡತನ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಯಿತು. ಊಟ ಬಟ್ಟೆ ವಸತಿಯ ವಿಷಯದಲ್ಲಿ ಮಕ್ಕಳಿಗೆ ಹೆಚ್ಚಿನ ಕೊರತೆಯಾಗದಂತೆ ಪೋಷಕರು ನೋಡಿಕೊಂಡರು. ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಪ್ರಗತಿ ಕಂಡುಬಂದಿತು. ಅವಿಭಕ್ತ ಕುಟುಂಬಗಳು ಶಿಥಿಲವಾಗಿ ಚಿಕ್ಕ ಸಂಸಾರಗಳು ಅಸ್ತಿತ್ವಕ್ಕೆ ಬಂದವು.

    ಅದರಿಂದಾಗಿ ಮಕ್ಕಳ ಮೇಲೆ ಪೋಷಕರ ಪ್ರೀತಿ ಹೆಚ್ಚಾಯಿತು. ಟಿವಿ ಮೊಬೈಲ್ ವಿಡಿಯೋ ಗೇಮ್ ಸಿನಿಮಾ ಮನರಂಜನೆ ಮುಂತಾದ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಯಿಂದ ಮಕ್ಕಳ ಮನಸ್ಥಿತಿ ಹೆಚ್ಚು ಶಾರ್ಪ್ ಆಯಿತು. ಕಲಬೆರಕೆ ಆಹಾರ ಜಂಕ್ ಪುಡ್ ಮುಂತಾದ ರಸಾಯನಿಕ ಮಿಶ್ರಿತ ಪದಾರ್ಥಗಳ ತಿಂಡಿಗಳು ಮತ್ತು ಅತಿಯಾದ ವಾಹನಗಳ ಬಳಸುವಿಕೆ ಹಾಗು ಪರಿಸರ ಮಾಲಿನ್ಯದಿಂದ ದೇಹ ಮತ್ತು ಮನಸ್ಸುಗಳಲ್ಲಿ ಆಲಸ್ಯ ಉಂಟಾಯಿತು.

    ತೀರಾ ಹಸಿವಿನ ಸಂಕಷ್ಟಗಳ ಅನುಭವ ಅವರಿಗೆ ಆಗಲೇ ಇಲ್ಲ. ಯಾವುದೇ ಭಯಂಕರ ಯುದ್ಧ, ಪ್ರಾಕೃತಿಕ ವಿಕೋಪ, ಹಿಂಸೆಯ ಕ್ರಾಂತಿ ಇತ್ತೀಚಿನ ವರ್ಷಗಳಲ್ಲಿ ನಡೆಯಲಿಲ್ಲ. ಇದರ ಜೊತೆಗೆ ಮಂಗನ ಕೈಗೆ ಮಾಣಿಕ್ಯ ಸಿಕ್ಕಂತೆ ಎಲ್ಲರ ಕೈಯಲ್ಲಿ ಸ್ಮಾರ್ಟ್ ಫೋನ್ ಮತ್ತು ಉಚಿತ ಇಂಟರ್ ನೆಟ್ ಸೌಲಭ್ಯ ಮತ್ತು ಓಡಾಡಲು ದ್ವಿಚಕ್ರ ವಾಹನ ದೊರೆಯಿತು. ಕೈಗೊಂದಿಷ್ಟು ಕಾಸು, ಹತ್ತಿರದಲ್ಲಿ ಮಾಲ್ ಗಳು. ಇಷ್ಟು ಸಾಕಲ್ಲವೇ ????

    ಇತಿಹಾಸದ ನೋವುಗಳ ನೆನಪುಗಳಿಲ್ಲ, ಭವಿಷ್ಯದ ಕನಸುಗಳ ಮುನ್ನೋಟವಿಲ್ಲ. ಈ ಕ್ಷಣದ ಮಜಾ ಮಾತ್ರ ಅವರ ಪ್ರಾಮುಖ್ಯತೆಯಾಯಿತು. ಸ್ವಂತಿಕೆ ಮತ್ತು ಸ್ವಾಭಿಮಾನ ಇಲ್ಲದೇ ಹೋಯಿತು.

    ಇದಕ್ಕಾಗಿಯೇ ಹೊಂಚು ಹಾಕಿ ಕುಳಿತಿದ್ದ ಕೆಲವು ರಾಜಕೀಯ ಪಕ್ಷಗಳು ಕೋತಿಗಳಿಗೆ ಕಡಲೆ ಬೀಜ ಹಾಕಿ ಭೋನಿಗೆ ಬೀಳಿಸುವಂತೆ ಭ್ರಷ್ಟಾಚಾರ, ಧರ್ಮ, ಜಾತಿ, ಭಾಷೆ, ಪಂಥ, ದೇಶಪ್ರೇಮ ಅದು ಇದು ಎಂಬ ಮಸಾಲೆ ಹಾಕಿದ ಕಡಲೇ ಬೀಜಗಳನ್ನು ಎಸೆದರು ನೋಡಿ. ಈ ಯುವಕರು ಸುಲಭವಾಗಿ ಅವರ ಬಲೆಗೆ ಬಿದ್ದರು.

    ಇದರ ಜೊತೆಗೆ ಎಲ್ಲೆಲ್ಲೂ ಬಾರ್ ಅಂಡ್ ರೆಸ್ಟೋರೆಂಟ್ ಗಳು, ಶಾಪಿಂಗ್ ಮಾಲ್ ಗಳು, ಸಿಗರೇಟು ಗಾಂಜಾಗಳು ಸುಲಭವಾಗಿ ದೊರೆಯತೊಡಗಿದವು, ಸಲ್ಮಾನ್ ಖಾನ್, ಶಾರುಖ್ ಖಾನ್, ಅಮೀರ್ ಖಾನ್, ಅಕ್ಷಯ್ ಕುಮಾರ್, ಹೃತಿಕ್ ರೋಶನ್, ರಣಭೀರ್ ಕಪೂರ್ ಗಳು, ಕರೀನಾ, ತಮನ್ನಾ, ದೀಪಿಕಾ ಪಡುಕೋಣೆ, ಕತ್ರಿನಾ ಕೈಪ್ ಗಳು, ದರ್ಶನ್, ಸುದೀಪ್, ಯಶ್ ಗಳು, ಜೊತೆಗೊಂದಿಷ್ಟು ಬೆಟ್ಟಿಂಗ್ ಕಟ್ಟಲು ತೆಂಡೂಲ್ಕರ್, ಕೊಹ್ಲಿ, ಧೋನಿಗಳು, ಹುಚ್ಚೆಬ್ಬಿಸಲು ಮೋದಿ, ರಾಹುಲ್ ಮಮತಾಗಳು,…..

    ಇನ್ನೆಲ್ಲಿಯ ಸ್ವಂತಿಕೆ. ಸೀಡ್ ಲೆಸ್ ಜನಾಂಗ ಸೃಷ್ಟಿಯಾಗದೆ ಇನ್ನೇನಾಗುತ್ತದೆ. ಆದರ್ಶಗಳಿಲ್ಲದ ಕೇವಲ ಆಡಂಬರಗಳು.

    ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾದ ಡಾಕ್ಟರ್ ಮಂಜುನಾಥ್ ಅವರು ಹೇಳಿದಂತೆ
    ” ಹಿಂದೆ ಮಕ್ಕಳು ತಂದೆ ತಾಯಿ ಮುಂತಾದ ಹಿರಿಯರನ್ನು ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದರು. ಈಗ ತಂದೆ ತಾಯಿಗಳು ಮಕ್ಕಳನ್ನು ಚಿಕಿತ್ಸೆಗಾಗಿ ಕರೆದುಕೊಂಡು ಬರುತ್ತಿರುವ ಬದಲಾವಣೆಯ ದೃಶ್ಯಗಳನ್ನು ನೋಡುತ್ತಿದ್ದೇವೆ “………

    ಇದು ದೇಹ ಸೀಡ್ ಲೆಸ್ ಆಗಿರುವುದಕ್ಕೆ ಒಂದು ಉದಾಹರಣೆ ಮಾತ್ರ. ಹಾಗೆಯೇ ಇಂದು ಯಾವುದೇ  ತರ್ಕಬದ್ಧವಾದ ಆಳವಾದ ಚಿಂತನೆಯಿಲ್ಲದೆ ವಿಷಯವನ್ನು ಕೇವಲ ವಾಕ್ಚಾತುರ್ಯ ಮತ್ತು ನಿರೂಪಣೆಯಿಂದ ಯುವ ಸಮೂಹವನ್ನು ಮೆಚ್ಚಿಸಿ ಅವರಿಂದ ಚಪ್ಪಾಳೆ ಮತ್ತು ಓಟು ಪಡೆಯಬಹುದು ಎಂಬುದು ಅವರ ಮಾನಸಿಕ ಸೀಡ್ ಲೆಸ್ ತನಕ್ಕೆ ಮತ್ತಷ್ಟು ಉದಾಹರಣೆಗಳು. ಆದ್ದರಿಂದಲೇ ಹಣ ಇರುವ ಜಾತಿ ರಾಜಕಾರಣದ ಭ್ರಷ್ಟ ವ್ಯಕ್ತಿಗಳು ಸುಲಭವಾಗಿ ಜನ ಪ್ರತಿನಿಧಿಗಳಾಗಿ ಮತ್ತೆ ಮತ್ತೆ ಆಯ್ಕೆಯಾಗುತ್ತಿದ್ದಾರೆ.

    ಮದುವೆಯಾಗಲು ಹುಡುಗ ಹುಡುಗಿಯರು ಕೇಳುತ್ತಿರುವ ಅಥವಾ ಬಯಸುತ್ತಿರುವ ಬೇಡಿಕೆಗಳು, ಕೆಲವೇ ತಿಂಗಳುಗಳಲ್ಲಿ ಅವರ ನಡುವೆ ಉಂಟಾಗುತ್ತಿರುವ ಭಿನ್ನಾಭಿಪ್ರಾಯಗಳು, ಹಣದ ಬಗೆಗಿನ ಮೋಹ, ವ್ಯಕ್ತಿತ್ವ ಮತ್ತು ಮೌಲ್ಯಗಳ ಬಗೆಗಿನ ತಿರಸ್ಕಾರ ಗಮನಿಸಿದರೆ ಈ ಸೀಡ್ ಲೆಸ್ ಜನಾಂಗದ ಬಗ್ಗೆ ಸ್ವಲ್ಪ ಅರ್ಥವಾಗಬಹುದು.

    ಸ್ವಾಮಿ ವಿವೇಕಾನಂದರ ಕನಸಿನಕಠಿಣ ಮನಸ್ಥಿತಿಯ, ಶುದ್ದ ವ್ಯಕ್ತಿತ್ವದ, ಕ್ರಿಯಾತ್ಮಕ ಚಿಂತನೆಯ ಭಾರತದ ಯುವ ಜನಾಂಗ ಎಲ್ಲಿ ಹೋಯಿತು….

    ದ್ವೇಷ ಕಾರುವ, ಶ್ರೇಷ್ಠತೆಯ ವ್ಯಸನದ, ಸಣ್ಣ ಮನಸ್ಸಿನ ಅಸೂಯಾಪರ ಯುವ ಜನಾಂಗವನ್ನು ನೋಡಿ ಮನಸ್ಸು ಒದ್ದಾಡುತ್ತಿದೆ.

    ಒಳ್ಳೆಯ ಅಂಶಗಳು ಇಲ್ಲವೆಂದಲ್ಲ. ಅದು ಸಾಕಷ್ಟು ಇದೆ. ಆದರೆ ಪಾಪ ಅವರಿಗೆ ಒಳ್ಳೆಯ ಮಾರ್ಗದರ್ಶನ ಮತ್ತು ಆದರ್ಶ ವ್ಯಕ್ತಿತ್ವಗಳು ಸಿಗುತ್ತಿಲ್ಲ. ಒಳ್ಳೆಯದನ್ನು ಗ್ರಹಿಸುವ ಮನಸ್ಥಿತಿಯನ್ನು ಅವರಲ್ಲಿ ನಾವು ಬೆಳೆಸುತ್ತಿಲ್ಲ.

    ಎಳನೀರಿನ ಜಾಗದಲ್ಲಿ ಪೆಪ್ಸಿ ಕೋಲಾಗಳು, ಗ್ರಂಥಾಲಯದ ಜಾಗದಲ್ಲಿ ಬಾರುಗಳು, ಮೈದಾನದ ಜಾಗದಲ್ಲಿ ಡಾಬಾಗಳು, ಸಹಜತೆಯ ಜಾಗದಲ್ಲಿ ಕೃತಕ ಬಣ್ಣಗಳು ಅವರನ್ನು ಆಕರ್ಷಿಸುತ್ತಿವೆ.

    ಯುವಕರ ಐಕಾನ್ ಸ್ವಾಮಿ ವಿವೇಕಾನಂದರ ಹುಟ್ಟು ಹಬ್ಬದ ಸಂದರ್ಭದಲ್ಲಿ…..

    ಮತ್ತೊಮ್ಮೆ ಯುವಕರನ್ನು ಈ ವಿಷ ಚಕ್ರದಿಂದ ಬಿಡುಗಡೆ ಮಾಡಿ ಸಹಜ ಮೌಲ್ಯಯುತ ಸುಂದರ ಬದುಕಿನತ್ತ ಕರೆದೊಯ್ಯುವ ಜವಾಬ್ದಾರಿ ನಾವು ಹೊರಬೇಕಿದೆ. ಅದರ ಪ್ರಯತ್ನದ ಒಂದು ಸಣ್ಣ ಭಾಗವೇ ಇದು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    ಸರಗೂರು:   ಜಯಲಕ್ಷ್ಮೀಪುರ ಗ್ರಾಮಸ್ಥರು ಒತ್ತಾಯದ ಮೇರೆಗೆ ತಾಲೂಕಿನಿಂದ ಜಯಲಕ್ಷೀಪುರ ಗ್ರಾಮಕ್ಕೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಟ್ಟ ತಾಲೂಕಿನ ಶಾಸಕರಾದ ಅನಿಲ್…

    ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ

    November 5, 2025

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ

    November 5, 2025

    ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ

    November 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.