ಬೆಂಗಳೂರು: ಹಬ್ಬದ ರಜೆ ದಿನಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶಿಸಿದೆ.
ಈ ಮೂಲಕ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ನೌಕರರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದೆ. ಜೂನ್ ವರೆಗೆ ಹಬ್ಬಗಳು, ಪ್ರವಾಸ, ಮದುವೆ ಮೊದಲಾದ ಕಾರ್ಯಕ್ರಮಗಳು ಹೆಚ್ಚಾಗಿರುತ್ತವೆ. ವಾಹನಗಳ ಕಾರ್ಯಾಚರಣೆಗೆ ಬೇಡಿಕೆ ಕೂಡ ಹೆಚ್ಚಾಗುತ್ತದೆ.
ಇಂತಹ ಸಂದರ್ಭದಲ್ಲಿ ಸಿಬ್ಬಂದಿ ಕೊರತೆ ಆಗಬಾರದು ಎನ್ನುವ ಕಾರಣಕ್ಕೆ ಕಾರ್ಯನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನ ನೀಡುವುದಾಗಿ ಕೆಎಸ್‌ಆರ್‌ಟಿಸಿ ಆದೇಶಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


