ಚಿಕ್ಕಮಗಳೂರಿನಲ್ಲಿ ಇಂದು ಮಾತನಾಡಿದ ಶಾಸಕ ಸಿ.ಟಿ ರವಿ, ಸಿದ್ಧರಾಮಯ್ಯಗೆ ಮೈಸೂರು ಭಾಗದಲ್ಲಿ ಗೆಲ್ಲುವ ವಿಶ್ವಾಸವಿಲ್ಲ. ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಬಳಿಕ ವಿಶ್ವಾಸ ಕಳೆದು ಕೊಂಡಿದ್ದಾರೆ.
ಈಗ ಬಾದಾಮಿ ಕ್ಷೇತ್ರದಲ್ಲಿ 2ನೇ ಬಾರಿ ಗೆಲ್ಲುವ ವಿಶ್ವಾಸವಿಲ್ಲ. ಹೀಗಾಗಿ ಕೋಲಾರ ಕ್ಷೇತ್ರಕ್ಕೆ ಹೋಗಿದ್ದಾರೆ ಎಂದು ಟಾಂಗ್ ನೀಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವನ್ನೂ ಜನರು ನಿರ್ಧರಿಸುತ್ತಾರೆ. ಜನರ ತೀರ್ಮಾನದ ಬಗ್ಗೆ ನಾನೇನು ಹೇಳುವುದಿಲ್ಲ. ಎಂದು ಶಾಸಕ ಸಿಟಿ ರವಿ ತಿಳಿಸಿದರು.
ಸಿದ್ಧರಾಮಯ್ಯಗೆ 40 ವರ್ಷದ ರಾಜಕೀಯ ಅನುಭವವಿದೆ. ಈಗಲೂ ಕ್ಷೇತ್ರದ ಹುಡುಕಾಟ ನಡೆಸುತ್ತಿರುವುದು ದುರಂತದ ವಿಚಾರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಲೇವಡಿ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


