ಉದ್ಘಾಟನೆಗೆ ಸಿದ್ಧವಾಗಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಕಿಡಿಗೇಡಿಗಳು ಕಲ್ಲೆಸೆದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದ್ದು, ಪರಿಣಾಮವಾಗಿ ಕಿಟಕಿ ಗಾಜು ಪುಡಿಪುಡಿಯಾಗಿದೆ.
ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿಕಂದರಾಬಾದ್ ಮತ್ತು ವಿಶಾಖಪಟ್ಟಣ ನಡುವೆ ಸಂಚರಿಸುವ ಈ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಜನವರಿ 15ರಂದು ಪ್ರಧಾನಿ ಮೋದಿ ಚಾಲನೆ ನೀಡಬೇಕಿತ್ತು.
ಕಂಚರಪಾಲೆಂನ ಕೋಚ್ ಸಂಕೀರ್ಣದಲ್ಲಿ ನಿಂತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಕಿಟಕಿಗಳ ಮೇಲೆ ಮೂವರು ಆರೋಪಿಗಳು ಕಲ್ಲುಗಳನ್ನೆಸೆದಿದ್ದು, ಪರಿಣಾಮವಾಗಿ ರೈಲಿನ ಗಾಜುಗಳು ಒಡೆದಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


