ಬೆಂಗಳೂರು : ಇಂದು ವಿಧಾನಸೌಧದ ಮುಂದೆ ಜಗಜ್ಯೋತಿ ಬಸವಣ್ಣ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುದ್ದಲಿ ಪೂಜೆ ನೆರವೇರಸಲಿದ್ದಾರೆ.
24 ಅಡಿ ಎತ್ತರದ ಬಸವಣ್ಣ ಮತ್ತು ಕೆಂಪೇಗೌಡ ಪುತ್ಥಳಿಗಳನ್ನು 8 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ. ಈ ಸಂಬಂಧ ಕಂದಾಯ ಸಚಿವ ಆರ್. ಅಶೋಕ್ ಸ್ಥಳಪರಿಶೀಲನೆ ನಡೆಸಿದ್ದರು.
ಸಂವಿಧಾನಶಿಲ್ಪಿ ಅಂಬೇಡ್ಕರ್ ಹಾಗೂ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಪ್ರತಿಮೆಗಳಿವೆ. ಇವೆರಡು ಪ್ರತಿಮೆಗಳ ನಡುವೆ ಬಸವಣ್ಣ ಮತ್ತು ಕೆಂಪೇಗೌಡ ಪ್ರತಿಮೆ ನಿರ್ಮಾಣವಾಗಲಿವೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


