ಕಲಬುರಗಿ : ಇದೇ ಜನವರಿ 19ಕ್ಕೆ 30 ಸಾವಿರ ಸೇರಿದಂತೆ ವಿವಿಧ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ.
ಮಳಖೇಡ ಬಳಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಂತೆ ಸುಮಾರು 60 ಎಕರೆ ವಿಶಾಲ ಪ್ರದೇಶದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ಪ್ರಧಾನಮಂತ್ರಿಗಳು ಅಂದು ಕಲಬುರಗಿ ಸೇರಿದಂತೆ ಯಾದಗಿರಿ, ಬೀದರ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮತ್ತು ಜಿಲ್ಲೆಯ ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


