ಅಪಹರಣಕಾರರ ಕಾರನ್ನು ಬೆನ್ನಟ್ಟಿದ ಪೊಲೀಸರು ಯುವಕನನ್ನು ರಕ್ಷಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಂಡೆಪಾಳ್ಯ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬುಧವಾರ ರಾತ್ರಿ 11.40ರ ಸುಮಾರಿಗೆ ಕೋರಮಂಗಲದ 100 ಅಡಿ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಆರೋಪಿಗಳು ಯುವಕನೋರ್ವನನ್ನು ಅಪಹರಿಸಿ ಅದೇ ರಸ್ತೆಯಲ್ಲಿ ಆಗಮಿಸುತ್ತಿದ್ದರು.
ಪೊಲೀಸರನ್ನು ಕಂಡ ತಕ್ಷಣವೇ ಗಾಬರಿಯಿಂದ ಕಾರಿನ ಚಾಲಕ ಭದ್ರತಾ ಬ್ಯಾರಿಕೇಡ್ ಇದ್ದ ಸ್ಥಳಕ್ಕೆ ನುಗ್ಗಿ ಪರಾರಿಯಾಗಲು ಮುಂದಾಗಿದ್ದಾನೆ. ಈ ವೇಳೆ ಕಾರಿನಲ್ಲಿದ್ದ ಯುವಕ ಸಹಾಯಕ್ಕಾಗಿ ಪೊಲೀಸರನ್ನು ಕೂಗಿಕೊಂಡಿದ್ದಾನೆ.
ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳ ಕಾರನ್ನು 2 ಕಿ.ಮೀ. ದೂರದ ವರೆಗೆ ಬೆನ್ನಟ್ಟಿದ್ದು, ಕೋರಮಂಗಲ ವಾಟರ್ ಟ್ಯಾಂಕ್ ಕಾರನ್ನು ತಡೆದಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಮೂವರು ಆರೋಪಿಗಳು ಕಾರಿನಿಂದ ಪರಾರಿಯಾಗಿದ್ದಾರೆ.
ಯುವಕನನ್ನು ರಕ್ಷಿಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಗೋಪಿ ಎಂದು ಗುರುತಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


