nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ

    June 25, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026
    Facebook Twitter Instagram
    ಟ್ರೆಂಡಿಂಗ್
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    • ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
    • ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    • ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
    • ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 9 ಸಾವಿರ ಕೋಟಿಯೋ? 6 ಸಾವಿರ ಕೋಟಿಯೋ?: ಸಚಿವ ಸುನೀಲ್ ಕುಮಾರ್ ಗೆ ಸಿದ್ದರಾಮಯ್ಯ ಪ್ರಶ್ನೆಗಳ ಬಾಣ
    ರಾಜ್ಯ ಸುದ್ದಿ January 13, 2023

    9 ಸಾವಿರ ಕೋಟಿಯೋ? 6 ಸಾವಿರ ಕೋಟಿಯೋ?: ಸಚಿವ ಸುನೀಲ್ ಕುಮಾರ್ ಗೆ ಸಿದ್ದರಾಮಯ್ಯ ಪ್ರಶ್ನೆಗಳ ಬಾಣ

    By adminJanuary 13, 2023No Comments2 Mins Read
    siddaramaiha

    Provided by
    Provided by

    ನಮ್ಮ ಸರ್ಕಾರ ಬಂದ ನಂತರ 9000 ಕೋಟಿ ರೂ. ನ್ನು ಎಸ್ಕಾಂಗಳಿಗೆ ನೀಡಿ ನೀವು ಮಾಡಿದ್ದ ಆಡಳಿತ ವೈಫಲ್ಯ ಸರಿಪಡಿಸಿದ್ದೇವೆ, ಮತಕ್ಕಾಗಿ ಇಂಧನ ಮಾರಾಟ ಮಾಡಬೇಡಿ ಎಂಬ ಸಚಿವ ಸುನೀಲ್ ಕುಮಾರ್ ಹೇಳಿಕೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

    ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಸ್ಕಾಂ ಗಳಿಗೆ ನೀಡಿದ್ದು 6000 ಕೋಟಿಯೋ? 9000 ಕೋಟಿಯೋ?  ಯಾವುದು ನಿಜ ಲೆಕ್ಕ? ಯಾವುದು ಸುಳ್ಳು ಲೆಕ್ಕ? ಎಂಬುದನ್ನು ಸಚಿವ ಸುನೀಲ್ ಕುಮಾರ್ ಅವರು ಮೊದಲು ಹೇಳಬೇಕು ಎಂದು ಸಿದ್ದರಾಮಯ್ಯ ಪ್ರಶ್ನೆಗಳ ಬಾಣ ಪ್ರಯೋಗಿಸಿದ್ದಾರೆ.

    2013ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಹೊತ್ತಿಗೆ ಹಿಂದಿನ ಸರ್ಕಾರ ವಿದ್ಯುತ್ ಇಲಾಖೆಯ ಮೇಲೆ ದೊಡ್ಡ ಮೊತ್ತದ ಸಾಲದ ಗಂಟನ್ನು ಹೊರಿಸಿ ಹೋಗಿತ್ತು, ಸಾಲ ಮಾಡಿ ಈ ಎಸ್ಕಾಂಗಳ ಬಾಕಿ ಮೊತ್ತ ತೀರಿಸಿ, ಕುತ್ತಿಗೆವರೆಗೂ ಮುಳುಗಿದ್ದ ಎಸ್ಕಾಂಗಳನ್ನು ಮೇಲೆತ್ತಿದವರು ನಾವು. ಅಗತ್ಯ ಇರುವ ಕ್ಷೇತ್ರಕ್ಕೆ ಹಣ ಹಾಕುವುದನ್ನು ನಷ್ಟ ಎನ್ನುವುದಿಲ್ಲ, ಬದಲಾಗಿ ಬಂಡವಾಳ ಹೂಡಿಕೆ ಎನ್ನುತ್ತಾರೆ ಎಂಬ ಅರ್ಥ ಶಾಸ್ತ್ರದ ಸರಳ ತತ್ವದ ಅರಿವಿಲ್ಲದ ಸುನೀಲ್ ಕುಮಾರ್ ಅವರ ಜ್ಞಾನಭಂಡಾರದ ಬಗ್ಗೆ ಅನುಕಂಪವಿದೆ ಎಂದಿದ್ದಾರೆ.

    ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ 2014–15 ರಲ್ಲಿ ರಾಜ್ಯದಲ್ಲಿ ಒಟ್ಟು ಉತ್ಪಾದನೆಯಾಗುತ್ತಿದ್ದ ವಿದ್ಯುತ್ ಪ್ರಮಾಣ 14,825 ಮೆ.ವ್ಯಾ ಮಾತ್ರ. ಅದರಲ್ಲಿ ಸೋಲಾರ್ ಮೂಲದಿಂದ 118 ಮೆ.ವ್ಯಾ ಮತ್ತು ಗಾಳಿ ಮೂಲದಿಂದ 2,655 ಮೆ. ವ್ಯಾ ವಿದ್ಯುತ್ ಉತ್ಪಾದನೆ ಆಗುತ್ತಿತ್ತು.  2018 ರ ವೇಳೆಗೆ ಸೋಲಾರ್ ಮೂಲದಿಂದ 6157 ಮೆ.ವ್ಯಾ. ಮತ್ತು ಗಾಳಿ ಮೂಲದಿಂದ 4730 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಶಕ್ತಿ ತುಂಬಿದವರು ನಾವು.


    Provided by
    Provided by

    ವಿದ್ಯುತ್ ಉತ್ಪಾದನೆ ಹೆಚ್ಚಾದರೆ ಇಲಾಖೆಗೆ ಲಾಭವಾಗುತ್ತಾ? ನಷ್ಟವಾಗುತ್ತಾ? ಕಲ್ಲಿದ್ದಲು ಮೂಲದ ಉಷ್ಣ ವಿದ್ಯುತ್ ಉತ್ಪಾದನೆ 2014-15 ರಲ್ಲಿ 6,197 ಮೆಗಾವ್ಯಾಟ್ ಇದ್ದದ್ದು, 2018 ರ ವೇಳೆಗೆ 11,366 ಮೆಗಾವ್ಯಾಟ್ ಗೆ ತಲುಪಿತ್ತು. ಇಂದು ನೀವು ವಿದ್ಯುತ್ ಮಾರಾಟ ಮಾಡಿ ಲಾಭ ಗಳಿಸುತ್ತಿದ್ದರೆ ಅದರ ಹಿಂದಿರುವುದು ನಮ್ಮ ಸರ್ಕಾರದ ಶ್ರಮ ಎಂದು ಸಿದ್ದರಾಮಯ್ಯ ಚುಚ್ಚಿದ್ದಾರೆ.

    2014-15 ರಲ್ಲಿ ನವೀಕರಿಸಬಹುದಾದ ಇಂಧನ ಮೂಲದಿಂದ ಒಟ್ಟು ಉತ್ಪಾದನೆಯಾಗುತ್ತಿದ್ದ ವಿದ್ಯುತ್ ಪ್ರಮಾಣ 4,855 ಮೆಗಾ ವ್ಯಾಟ್. 2018 ರ ವೇಳೆಗೆ ಇದು 13,500 ಮೆಗಾ ವ್ಯಾಟ್ ಗಿಂತ ಹೆಚ್ಚಾಯಿತು. ಇದನ್ನು ನಷ್ಟ ಎಂದು ಯಾವ ಗಣಿತದ ಲೆಕ್ಕ ಹೇಳುತ್ತದೆ? ಒಂದು ಕಾಲದಲ್ಲಿ ಕೇವಲ 2-3 ಗಂಟೆ ವಿದ್ಯುತ್ ಒದಗಿಸಲು ಸಂಕಷ್ಟ ಪಡುತ್ತಿದ್ದ ರಾಜ್ಯವು 2018 ರ ವೇಳೆಗೆ 28,741 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಹಂತಕ್ಕೆ ತಲುಪಿತ್ತು.

    ನಮ್ಮ 5 ವರ್ಷಗಳ ಆಡಳಿತದ ಅವಧಿಯಲ್ಲಿ 13,175 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿದ್ದೆವು. ರಾಜ್ಯದ ಅಗತ್ಯತೆಗೆ ಸಾಕಾಗಿ, ಹೊರರಾಜ್ಯಗಳಿಗೆ ಮಾರಾಟ ಮಾಡುವಷ್ಟು ವಿದ್ಯುತ್ ಅನ್ನು ನಾವೇ ಉತ್ಪಾದನೆ ಮಾಡುತ್ತಿದ್ದರು, ದುಪ್ಪಟ್ಟು ದರ ನೀಡಿ ಹೊರಗಿನಿಂದ ಖರೀದಿ ಮಾಡುತ್ತಿರುವ ನಿಮ್ಮ ಸರ್ಕಾರ ಎಸ್ಕಾಂ ಗಳನ್ನು ಉದ್ಧಾರ ಮಾಡಿದೆ ಎಂಬುದು ತಮಾಷೆಯಾಗಿದೆ ಎಂದಿದ್ದಾರೆ.

    ಸಚಿವ ಸುನೀಲ್ ಕುಮಾರ್ ಅವರ ಅಸಾಮರ್ಥ್ಯಕ್ಕೆ ತಕ್ಕುದಾಗಿ ರಾಜ್ಯದ ವಿದ್ಯುತ್ ಇಲಾಖೆ ಕೆಲಸ ಮಾಡುತ್ತಿದೆ. ನಾವು ಅಧಿಕಾರಕ್ಕೆ ಬಂದ ಮೇಲೆ ಇಲಾಖೆಯನ್ನು ಲಾಭದ ಹಳಿಗೆ ತಂದು, ರಾಜ್ಯದ ಜನರಿಗೆ ಉಚಿತವಾಗಿ 200 ಯುನಿಟ್ ವಿದ್ಯುತ್ ನೀಡುತ್ತೇವೆ. ಸನ್ಮಾನ್ಯ ಸುನೀಲ್ ಕುಮಾರ್ ಅವರೇ, ನಾವು ನುಡಿದಂತೆ ನಡೆಯುವವರು. ಈ ಬಗ್ಗೆ ಅನುಮಾನವೇ ಬೇಡ. ರಾಜ್ಯದ ಜನರಿಗೆ 200 ಯುನಿಟ್ ಉಚಿತ ಘೋಷಣೆ ಮಾಡಿ, ಕಾರ್ಯಕ್ರಮಕ್ಕೆ ನಿಮ್ಮನ್ನೂ ಆಹ್ವಾನಿಸುತ್ತೇವೆ. ತಪ್ಪದೇ ಬನ್ನಿ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ

    June 25, 2026

    ತುಮಕೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) ಯೋಜನೆಯ ಕುರಿತ ತರಬೇತಿ…

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.