ವಿಜಯನಗರ : ಈ ಬಾರಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲ್ಲ, ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಹೊಸಪೇಟೆಯಲ್ಲಿ ಕೋಡಿಮಠದ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ, ಈ ಬಾರಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲ್ಲ, ಕೊರೊನಾದಿಂದ ಯಾವುದೇ ಅಂತಹ ತೊಂದರೆಯಾಗಲ್ಲ.
ಎರಡ್ಮೂರು ದೊಡ್ಡ ದೊಡ್ಡ ತಲೆಗಳು ಉರುಳುತ್ತವೆ. ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರಲಿದೆ. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲ್ಲ ಎಂದಿದ್ದಾರೆ.
ಸಂಕ್ರಾಂತಿ, ಯುಗಾದಿಯ ಬಳಿಕ ಮತ್ತೆ ಮಳೆಯಾಗುತ್ತದೆ. ಕಳೆದ ಬಾರಿ ಬಂದ ಹಾಗೆ ಈ ಬಾರಿ ಕೂಡ ಅದೇ ರೀತಿ ಮಳೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


