ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಬೆಂಗಳೂರು-ಪುದುಚೇರಿ ಹೆದ್ದಾರಿ ಬಳಿಯ ತಮಿಳುನಾಡಿನ ಕಾಂಚೀಪುರಂನಲ್ಲಿ ನಡೆದಿದೆ.
ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಗುರುವಾರ ರಾತ್ರಿ 7 ಗಂಟೆ ಸುಮಾರಿಗೆ ಖಾಸಗಿ ಶಾಲೆಯ ಆವರಣದಲ್ಲಿ ಮಾತನಾಡುತ್ತಿದ್ದಾಗ ಐದು ಜನರ ತಂಡವು ಸಂತ್ರಸ್ತೆ ಮತ್ತು ಸ್ನೇಹಿತನಿಗೆ ಚಾಕು ತೋರಿಸಿ ಬೆದರಿಸಿ ಸಂತ್ರಸ್ತೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ.
ಕಾಮುಕರಿಂದ ತಪ್ಪಿಸಿಕೊಂಡ ವಿದ್ಯಾರ್ಥಿ ಮತ್ತು ಆಕೆಯ ಸ್ನೇಹಿತ ತಮ್ಮ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ನಂತರ ಕುಟುಂಬಸ್ಥರು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕತ್ತಲಾಗಿದ್ದ ಕಾರಣ ಯಾರನ್ನೂ ಗುರುತಿಸಲು ಸಾಧ್ಯವಾಗಲಿಲ್ಲ ಎಂದು ವಿದ್ಯಾರ್ಥಿ ಪೊಲೀಸರಿಗೆ ತಿಳಿಸಿದ್ದಾಳೆ. ಆದರೆ ಆರೋಪಿಗಳಲ್ಲಿ ಒಬ್ಬರು ಇನ್ನೊಬ್ಬರಿಗೆ ಕರೆ ಮಾಡಿದಾಗ ವಿಮಲ್ ಎನ್ನುತ್ತಿರುವುದು ಕೇಳುತ್ತಿತ್ತು ಎಂದು ಹೇಳಿದ್ದಾಳೆ.
ಸಂತ್ರಸ್ತೆಯಿಂದ ಮಾಹಿತಿ ಪಡೆದ ಪೊಲೀಸರು ವಿಮಲನನ್ನು ವಿಪಡು ಗ್ರಾಮದಲ್ಲಿ ಪತ್ತೆ ಹಚ್ಚಿದ್ದಾರೆ.. ವಿಮಲನನ್ನು ಪರಾರಿಯಾಗಲು ಯತ್ನಿಸುತ್ತಿದ್ದಾಗ ಬಂಧಿಸಿದ್ದಾರೆ. ಆರೋಪಿ ವಿಮಲ್ ನನ್ನು ಬಾಯಿ ಬಿಡಿಸಿದ ತಮಿಳುನಾಡು ಪೊಲೀಸರು ಇತರ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಮಣಿಕಂದನ್, ಶಿವಕುಮಾರ್, ವಿಘ್ನೇಶ್ ಮತ್ತು ತೆನ್ನರಸು ಎಂದು ಗುರುತಿಸಿದ್ದಾರೆ. ಎಲ್ಲಾ ಐವರು ಆರೋಪಿಗಳ ವಿರುದ್ಧ ಅತ್ಯಾಚಾರ ಆರೋಪಗಳನ್ನು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


