ನವದೆಹಲಿ: 500 ರೂಪಾಯಿಗೆ ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
‘ಭಾರತ್ ಜೋಡೋ ಯಾತ್ರೆ’ ಮುಕ್ತಾಯ ಹಂತಕ್ಕೆ ಬಂದಿದ್ದು, ಈ ಸಂದರ್ಭದಲ್ಲಿ ಚುನಾವಣೆ ಪ್ರಣಾಳಿಕೆ ಭರವಸೆಗಳ ಮೊದಲ ಪಟ್ಟಿಯನ್ನು ಪರೋಕ್ಷವಾಗಿ ಘೋಷಣೆ ಮಾಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಜನವರಿ 30ರಂದು ಭಾರತ್ ಜೋಡೋ ಯಾತ್ರೆ ಮುಕ್ತಾಯವಾಗಲಿದೆ. ರಾಹುಲ್ ಗಾಂಧಿ ದೇಶದ ಜನರಿಗೆ ಬಹಿರಂಗ ಪತ್ರ ಬರೆದಿದ್ದು, ಕಡಿಮೆ ದರದಲ್ಲಿ ಪೆಟ್ರೋಲ್, ಡೀಸೆಲ್ ಮಾರಾಟ ಮಾಡಲಾಗುವುದು. 500 ರೂ.ಗೆ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ದೇಶದಲ್ಲಿ ಸೌಹಾರ್ದತೆ ಸೃಷ್ಟಿಸಲಾಗುವುದು, ರೈತರ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ, ಯುವಕರಿಗೆ ಉದ್ಯೋಗ, ಉದ್ದಿಮೆಗಳಿಗೆ ಪ್ರೋತ್ಸಾಹ, ಸಂಪತ್ತಿನ ಸಮಾನ ಹಂಚಿಕೆ ಮಾಡಲಾಗುವುದು ಎಂದು ರಾಹುಲ್ ಗಾಂಧಿ ದೇಶದ ಜನತೆಗೆ ಬಹಿರಂಗ ಪತ್ರ ಬರೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


