ಮಧುರೈ: ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಸ್ಪರ್ಧೆ ವೇಳೆ ಅನಾಹುತ ಸಂಭವಿಸಿದ್ದು, ಹೋರಿ ತಿವಿದ ಪರಿಣಾಮ 19 ಮಂದಿ ಸ್ಪರ್ಧಿಗಳು ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
ತಮಿಳುನಾಡಿನ ಮಧುರೈನ ಅವನಿಯಪುರಂನಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡ 11 ಮಂದಿ ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಂಗಲ್ ಹಬ್ಬದ ಅಂಗವಾಗಿ ಮಧುರೈನ ಮೂರು ಗ್ರಾಮಗಳಲ್ಲಿ ಜಲ್ಲಿಕಟ್ಟು ಅದ್ದೂರಿಯಾಗಿ ಆರಂಭವಾಯಿತು. ಇದು ಸ್ಥಳೀಯ ಹೋರಿ ಪಳಗಿಸುವ ಕ್ರೀಡೆಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


